ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗದಿಂದ ರಾಜ್ಯಪಾಲರ ಭೇಟಿ, ಪತ್ರಿಕಾ ದಿನಾಚರಣೆಗೆ ಆಹ್ವಾನ

ಬೆಂಗಳೂರು: ರಾಜ್ಯಪಾಲರಾದ ಥವಾರ್ ಚಂದ್ ಗೆಹ್ಲೊಟ್ ರವರನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ನಿಯೋಗ ಗುರುವಾರ ಸೌಹಾರ್ದಯುತ ಭೇಟಿ ಮಾಡಿ ಚರ್ಚೆ ನಡೆಸಿತು. ಜುಲೈ 1 ರಂದು ಆಯೋಜಿಸಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಗಮಿಸುವಂತೆ ರಾಜ್ಯಪಾಲರನ್ನು ಆಹ್ವಾನಿಸಲಾಯಿತು.

ಇದೇ ಸಂದರ್ಭದಲ್ಲಿ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ ಅವರು, ಕನ್ನಡ ಪತ್ರಿಕೋದ್ಯಮ ಬಗ್ಗೆ ಮಾಹಿತಿಯುಳ್ಳ “ಕನ್ನಡ ಜರ್ನಲಿಸಮ್ ಮತ್ತು ಟಿಎಸ್ಆರ್” ಪುಸ್ತಕವನ್ನು ರಾಜ್ಯಪಾಲರಿಗೆ ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರು, ತಾವು ಬರೆದ “ಕೋವಿಡ್ ಕಥೆಗಳು” ಪುಸ್ತಕವನ್ನು ಕೊಡುಗೆಯಾಗಿ ನೀಡಿದರು.

ನಿಯೋಗದಲ್ಲಿ ಅಕಾಡೆಮಿ ಸದಸ್ಯರಾದ ನಾಗಾರ್ಜುನ ದ್ವಾರಕನಾಥ್, ಬದ್ರುದ್ದೀನ್, ಶಿವರಾಜ್, ಎಸ್.ಲಕ್ಷ್ಮಿನಾರಾಯಣ, ಶಿವಕುಮಾರ್ ಬೆಳ್ಳಿತಟ್ಟೆ ಅವರಿದ್ದರು. ಬೆಂಗಳೂರಿನ ಜಯನಗರ ಬಡಾವಣೆಯಲ್ಲಿ ಇರುವ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತ್ ಕುಮಾರ್ ಅವರ ಕಚೇರಿಯನ್ನು ಅನಂತ ಪ್ರೇರಣಾ ಕೇಂದ್ರವನ್ನಾಗಿ ಪರಿವರ್ತಿಸಲಾಗಿದ್ದು,  ಈ ಕೇಂದ್ರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್,  ಇಂದು ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಉದಯ ಗರುಡಾಚಾರ್, ರವಿಸುಬ್ರಹ್ಮಣ್ಯ, ಅದಮ್ಯ ಚೇತನ ಸಂಸ್ಥೆ ಮುಖ್ಯಸ್ಥೆ ತೇಜಸ್ವಿನಿ ಅನಂತಕುಮಾರ್, ಅನಂತಕುಮಾರ ಪ್ರತಿಷ್ಠಾನದ ಅಧ್ಯಕ್ಷ ಪಿ ಕೃಷ್ಣ ಭಟ್ ಮತ್ತು ಇತರರು ಉಪಸ್ಥಿತರಿದ್ದರು.

Related