ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ

ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆಯ ಕಣ ರಂಗೇರಿದ್ದು, ಇಂದು ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮ ಸಲ್ಲಿಸುತ್ತಿದ್ದಾರೆ.

ಅದರಂತೆ ಇಂದು ಬಿಜೆಪಿಯ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ಪಿಸಿ ಮೋಹನ್ ರವರು ಇಂದು ನಾಮಪತ್ರ ಸಲ್ಲಿಸಿದರು.

ಹೌದು, ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೆತ್ರ ವ್ಯಾಪ್ತಿಯಲ್ಲಿ ಬಿಜೆಪಿಯ ಅಭ್ಯರ್ಥಿಯಾದ ಶ್ರೀ ಪಿ.ಸಿ ಮೋಹನ್ ರವರು ಇಂದು ಬೆಂಗಳೂರು ಕೇಂದ್ರ ಚುನಾವಣಾಧಿಕಾರಿಯಾದ ಡಾ. ಕೆ. ಹರೀಶ್ ಕುಮಾರ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕ ಆರ್ ಅಶೋಕ್, ಶಾಸಕ ಗಾಲಿ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಶಾಸಕ ಅರವಿಂದ್ ಲಿಂಬಾವಳಿ ಉಪಸ್ಥಿತರಿದ್ದರು.

Related