ಕರ್ನಾಟಕ ಕಟುಕರ ಕೈಯಲ್ಲಿದೆ : ಬಿಜೆಪಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಕರ್ನಾಟಕ ಕಟುಕರ ಕೈಯಲ್ಲಿದೆ : ಬಿಜೆಪಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

ಬೆಂಗಳೂರು, ಜೂ 15 : ಹಿAದಿ ಮಾತನಾಡುವ ವಿದ್ಯಾರ್ಥಿಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡುವಂತೆ ಬೆಂಗಳೂರು ಡಿಡಿಪಿಐ ಆದೇಶ ನೀಡಿರುವುದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಅವರು, ಸ್ವಾತಂತ್ರ್ಯೊತ್ಸವ ಅಮೃತ ಮಹೋತ್ಸವ ನಿಮಿತ್ತ ಒಂದು ಭಾರತ-ಶ್ರೇಷ್ಠ ಕಾರ್ಯಕ್ರಮದಡಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳ ಪ್ರವಾಸಕ್ಕೆ ಕರೆದೊಯ್ಯಲು ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡುವಂತೆ ಆದೇಶಿಸಲಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಮೇಲೆ ಕನ್ನಡ ಮತ್ತು ಕರ್ನಾಟಕದ ಮೇಲೆ ದಬ್ಬಾಳಿಕೆ ಹೆಚ್ಚುತ್ತಲೇ ಇದೆ. ಕನ್ನಡವನ್ನೇ ಮೂಲೋತ್ಪಾಟನೆ ಮಾಡಿ, ಕನ್ನಡ ಅಸ್ಮಿತೆಯನ್ನೇ ಕಣ್ಮರೆಗೊಳಿಸುವ ಕಿರಾತಕ ಹುನ್ನಾರ ಇದಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೂಡಲೇ ಇಂಥ ದ್ರೋಹದ ಆದೇಶ ನೀಡಿದ ಅಧಿಕಾರಿಯನ್ನು ಕಿತ್ತೊಗೆಯಬೇಕು ಮತ್ತು ಆ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಪ್ರವಾಸಕ್ಕೆ ಕನ್ನಡ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Related