ರಾಜ್ಯ ಸರ್ಕಾರ ವಿಫಲ: ಡಿಕೆಶಿ

ರಾಜ್ಯ ಸರ್ಕಾರ ವಿಫಲ: ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎಲ್ಲೆ ಮೀರಿ ಹೆಚ್ಚಾಗುತ್ತಿದ್ದು, ಕೋವಿಡ್ ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ರಾಜ್ಯಾದಾದ್ಯಂತ ಕೋವಿಡ್ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಡಿಕೆ ಶಿವಕುಮಾರ್ ಅವರು, ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಪಡೆ ಹಾಗೂ ವೈದ್ಯ ಘಟಕದ ಜತೆ ಸಮಾಲೋಚನೆ ನಡೆಸಿದರು.

ಈ ವೇಳೆ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ, ಸಲೀಂ ಅಹಮದ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಚ್‍ಕೆ ಪಾಟೀಲ್ ಹಾಗೂ ಕೋವಿಡ್ ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಉಪಸ್ಥಿತರಿದ್ದರು.

Related