ಬಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ

ಬಜೆಪಿ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ

ಮೈಸೂರು:  ರಾಜ್ಯ ಸರ್ಕಾರ ಮೀಸಲಾತಿ ಹೆಸರಲ್ಲಿ ಲಾಲಿಪಾಪ್ ನೀಡಿದೆ. ಸುಪ್ರೀಂಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಲು ಬಿಜೆಪಿ ಸರ್ಕಾರ ವಿಫಲವಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿತ್ತು. ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆ ಆಗಿದೆ. ಇದು ಡಬಲ್‌ ಇಂಜಿನ್ ದೋಖಾ. ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಸರಲ್ಲಿ ಮೋಸ ಮಾಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ ಮಾಡಿದರು.

ಮೈಸೂರಿನಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮುಸ್ಲಿಂ ಮೀಸಲಾತಿ ರದ್ದು ಮಾಡಿದ ಆದೇಶವನ್ನೇ ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಇದರಿಂದ ಮೀಸಲಾತಿ ಹೆಸರಲ್ಲಿ ಸುಳ್ಳು ಹೇಳುತ್ತಿರುವ ಬಿಜೆಪಿಗೆ ಹಿನ್ನೆಡೆ ಆಗಿದೆ.

ಮೀಸಲಾತಿ ಬದಲಾವಣೆ/ಪರಿಷ್ಕರಣೆಯನ್ನು ಸಮರ್ಥಿಸಿಕೊಳ್ಳಲಾಗದ ಬಿಜೆಪಿ ಲಿಂಗಾಯತ, ಒಕ್ಕಲಿಗ, ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ವಂಚನೆ ಮಾಡಿದ್ದು ಯಾಕೆ ಸುಪ್ರೀಂಕೋರ್ಟ್ ನಲ್ಲಿ ಯಾಕೆ ಮೀಸಲಾತಿಯನ್ನು ಸಮರ್ಥಿಸಿಕೊಳ್ಳಲಿಲ್ಲ. ನರೇಂದ್ರ ಮೋದಿ, ಬಸವರಾಜ ಬೊಮ್ಮಾಯಿ ಸರ್ಕಾರ ಸುಪ್ರೀಂಕೋರ್ಟ್ ನಲ್ಲಿ ಮೀಸಲಾತಿ ಕೇಸ್‌ಗೆ ಸಂಬಂಧಪಟ್ಟಂತೆ ಯಾಕೆ ಅಫಿಡವಿಟ್ ಸಲ್ಲಿಸಲಿಲ್ಲ ಎಂದು ಪ್ರಶ್ನಿಸಿದರು.

 

Related