ಗೆಲುವು ಖಚಿತ ಬಿಎಸ್‌ವೈ..

ಗೆಲುವು ಖಚಿತ ಬಿಎಸ್‌ವೈ..

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಮಾಜಿಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಸಿದ ಬಳಿಕ ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿ ಅವರು ನಮ್ಮೆಲ್ಲರ ಭಾವನೆಗಳಿಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಸಭಾ ಚುನಾವಣೆಗೆ ರಾಜ್ಯದಿಂದಲೇ ಕಣಕ್ಕಿಳಿಸಿದ್ದಾರೆ.

ಅವರಿಗೆ ಅಭಿನಂದನೆ ಹೇಳುತ್ತೇನೆ ಎಂದರು. ಚುನಾವಣೆಯಲ್ಲಿ ಬಿಜೆಪಿ ಸ್ಥಾನಗಳನ್ನು ಸುಲಭವಾಗಿ ಗೆಲ್ಲಲಿದೆ. ೩ನೇ ಸ್ಥಾನವನ್ನು ಗೆಲ್ಲಲು ಸರ್ವ ಪ್ರಯತ್ನ ಮಾಡುತ್ತೇವೆ, ೩ನೇ ಸ್ಥಾನವನ್ನು ಗೆಲ್ಲುವ ವಿಶ್ವಾಸವಿದೆ ಎಂದರು. ಸಂದರ್ಭದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ಕುಮಾರ್ ಕಟೀಲು ಮತ್ತಿತರರು ಉಪಸ್ಥಿರಿದ್ದರು.

Related