ಬಸವಣ್ಣರ ಪಠ್ಯ ಮತ್ತೆ ಪರಿಷ್ಕರಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಸವಣ್ಣರ ಪಠ್ಯ ಮತ್ತೆ ಪರಿಷ್ಕರಣೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ ಜೂ.04 :  ನಮ್ಮದು ಬಸವ ಪಥದ ಸರ್ಕಾರ, ಬಸವಣ್ಣನವರ ವಚನ ಸಾಹಿತ್ಯ ಉತ್ಕೃಷ್ಟವಾದದು. ನಾಡಿನ ಮಠಾಧೀಶರು, ಸ್ವಾಮೀಜಿಗಳ ಅಭಿಪ್ರಾಯ ಪಡೆದು ಬಸವಣ್ಣನ ನಿಜ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಜಿಲ್ಲೆಯ ಹಿರಿಯೂರು ಹಾಗೂ ಹೊಸದುರ್ಗ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನಿಮಿತ್ತ ಸಿಎಂ, ಜಿಲ್ಲೆಗೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿರಿಯೂರು ತಾಲೂಕಿನ ದೇವರಕೊಟ್ಟ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಕಾರ್ಯ ಪೂರ್ಣಗೊಂಡಿರುವುದರಿಂದ ಸಮಿತಿ ವಿಸರ್ಜನೆ ಮಾಡಲಾಗಿದೆ. ಯಾವುದೇ ಒತ್ತಡದಿಂದ ಈ ನಿರ್ಧಾರ ಕೈಗೊಂಡಿಲ್ಲ. ಹೊಸ ಸಮಿತಿ ರಚಿಸುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬಸವಣ್ಣ ಪಠ್ಯದಲ್ಲಿ ಸಮಗ್ರ ಬದಲಾವಣೆ ತರಲಾಗುವುದು. ಹೆಗಡೆವಾರ್ ಪಠ್ಯ ಇರುವುದರಲ್ಲಿ ಯಾವುದೇ ತಪ್ಪಿಲ್ಲ.ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಪರಿಷ್ಕೃತ ಪಠ್ಯದ ಸಂಪುಟ ವಿತರಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣ ಸ್ವಾಮಿ, ಜಲಸಂಪನ್ನೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್, ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಶಾಸಕಿ ಪೂರ್ಣಿಮಾ ಶ್ರೀನಿವಾಸ, ಜಿ.ಹೆಚ್.ತಿಪ್ಪಾರೆಡ್ಡಿ, ರಾಜೇಶ್ ಗೌಡ, ಚಿದಾನಂದ ಗೌಡ, ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರು ಹಾಗೂ ಸ್ಥಳಿಯರ ಮನವಿಗಳನ್ನು ಸ್ವೀಕರಿಸಿದರು.

Related