7 ಕೆರೆಗಳಿಗೆ ನೀರು ತಿಂಬಿಸುವ ಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

7 ಕೆರೆಗಳಿಗೆ ನೀರು ತಿಂಬಿಸುವ ಯೋಜನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಚಿತ್ರದುರ್ಗ ಜೂನ್ 04 : ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಹಿರಿಯೂರು ತಾಲ್ಲೂಕಿನ ಧರ್ಮಪುರ ಕೆರೆ ಮತ್ತು ಇತರೆ 7 ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. ನಂತರ ನಡೆದ ಸಮಾರಂಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.

ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ, ಕಪಿಲ್ ಮೋರೇಶ್ವರ್, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ, ಬಿ.ಸಿ. ಪಾಟೀಲ್, ಬಿ. ಎ. ಬಸವರಾಜ, ಕೆ ಎಸ್ ಆರ್ ಟಿ ಸಿ ಅಧ್ಯಕ್ಷ ಎಂ. ಚಂದ್ರಪ್ಪ, ಶಾಸಕರಾದ ಪೂರ್ಣಿಮಾ ಶ್ರೀನಿವಾಸ್, ತಿಪ್ಪೇಸ್ವಾಮಿ, ವೈ. ಎ. ನಾರಾಯಣಸ್ವಾಮಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Related