ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹೂಡಿಕೆದಾರರಲ್ಲಿ ಕರ್ನಾಟಕ ವಿಶ್ವಾಸ ಮೂಡಿಸಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 27 : ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಕಂಪನಿಗಳು ಮುಂದೆ ಬಂದಿವೆ. ಅಂದಾಜು ೬೫ ಸಾವಿರ ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಕಂಪನಿಗಳು ಬದ್ಧತೆ ತೋರಿವೆ. ಇದು ಕೈಗಾರಿಕೆ ಸ್ಥಾಪನೆಗೆ ರಾಜ್ಯ ನೀಡುತ್ತಿರುವ ಪ್ರೋತ್ಸಾಹ ಹಾಗೂ ನೀತಿ ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕರ್ನಾಟಕ ಬಂಡವಾಳ ಆಕರ್ಷಣೆಯಲ್ಲಿ ಮುಂಚೂಣಿಯಲ್ಲಿದ್ದು, ಒಟ್ಟು 65 ಸಾವಿರ ಕೋಟಿ ಬಂಡವಾಳ ಹೂಡಿಕೆಗೆ ವಿಶ್ವ ಪ್ರಮುಖ ಸಂಸ್ಥೆಗಳು ಬದ್ಧತೆ ತೋರಿದ್ದು, ಸುಮಾರು 25 ಕಂಪನಿಗಳೊಂದಿಗೆ ಚರ್ಚಿಸಲಾಗಿದೆ. ಭಾರತ ದೇಶವನ್ನು ಹೊಸ ಆರ್ಥಿಕ ಶಕ್ತಿಯಾಗಿ ವಿಶ್ವ ಎದುರುನೋಡುತ್ತಿದೆ.. ಬಂಡವಾಳ ಹೂಡಿಕೆಯ ಜೊತೆಗೆ ವಿಸ್ತರಣಾ ಕಾರ್ಯಕ್ಕೂ ಉತ್ಸುಕತೆ ತೋರಿದರು. ಹೈಡ್ರೋ ಪವರ್, ಏರೋಸ್ಪೇಸ್, ನವೀಕರಿಸಬಹುದಾದ ಇಂಧನ ಸೇರಿದಂತೆ ಪ್ರಮುಖ ಕ್ಷೇತ್ರದ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಬಂಡವಾಳ ಹೂಡಿಕೆಯಲ್ಲಿ ಆಸಕ್ತಿ ತೋರಿದರು. ಹವಾಮಾನ ಬದಲಾವಣೆ, ನವೀಕರಿಸಬಹುದಾದ ಇಂಧನಗಳ ಬಗ್ಗೆ ಸಮಗ್ರ ಚರ್ಚೆ ನಡೆಯಿತು ಎಂದರು.


ರೆನ್ಯೂ ಪವರ್ ಪ್ರೈ.ಲಿ. ಕಂಪೆನಿಯು 50 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು, ಮುಂದಿನ 7 ವರ್ಷಗಳಲ್ಲಿ ನವೀಕರಿಸಬಹುದಾದ ಇಂಧನ, ಬ್ಯಾಟರಿ ಸ್ಟೋರೇಜ್, ಗ್ರೀನ್ ಹೈಡ್ರೋಜನ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 30 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು 2 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ ಮಾಡಿಕೊಂಡಿದ್ದು,4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. 10 ಸಾವಿರಕ್ಕೂ ಹೆಚ್ಚು ಉದ್ಯೋಗವನ್ನು ನೀಡಲಿದೆ ಎಂದರು.

ನವೆಂಬರ್ ಮಾಹೆಯೊಳಗೆ ನಗರದ ಮೂಲಸೌಲಭ್ಯವನ್ನು ಸರಿಪಡಿಸಲಾಗುವುದು. ಇದಕ್ಕಾಗಿ ಕಾರ್ಯಪಡೆಯನ್ನು ರಚಿಸಲಾಗಿದೆ. ನಗರೋತ್ಥಾನ ಯೋಜನೆಯಡಿಯಲ್ಲಿ 6 ಸಾವಿರ ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು, ಮುಂದಿನ 18 ತಿಂಗಳಲ್ಲಿ ಕೆಲಸ ಪೂರ್ಣಗೊಳಿಸಲಾಗುವುದು ಎಂದರು.

Related