ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ..

ವಿಧಾನಪರಿಷತ್ ಏಳು ಸ್ಥಾನಗಳಿಗೆ ಅವಿರೋಧ ಆಯ್ಕೆ..

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ದಿನಾಂಕ: 03-06-2022 ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಇಂದು ಘೋಷಿಸಿದರು.

ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಿದ್ದ ಸವದಿ ಲಕ್ಷ್ಮಣ, ಟಿ. ನಾರಾಯಣ ಸ್ವಾಮಿ, ಶ್ರೀಮತಿ ಹೇಮಾಲತಾ ನಾಯಕ ಹಾಗೂ ಕೇಶವ ಪ್ರಸಾದ.ಎಸ್. ಭಾರತೀಯ ಕಾಂಗ್ರೆಸ್ ಪಕ್ಷದಿಂದ ಕೆ.ಅಬ್ದುಲ್ ಜಬ್ಬಾರ್ ಹಾಗೂ ಎಮ್. ನಾಗರಾಜು. ಜೆಡಿಎಸ್ ಪಕ್ಷದಿಂದ ಶರವಣನ್.ಟಿ ಅವರು ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.

ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸದರು.

Related