ಜನರ ಸಹಭಾಗಿತ್ವ ಬಹಳ ಮುಖ್ಯ: ಬಸವರಾಜ ಬೊಮ್ಮಾಯಿ

ತುಮಕೂರು, ಮೇ 16: ಸಾಮಾಜಿಕ ಹೊಣೆಗಾರಿಕೆಯಲ್ಲಿ  ಜನರ ಸಹಭಾಗಿತ್ವ ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಆಲದ ಮರದ ಪಾರ್ಕ್ ನ ನಿರ್ವಹಣಾ ಜವಾಬ್ದಾರಿಯನ್ನು ತುಮಕೂರಿನ ಪ್ರೆಸ್ ಕ್ಲಬ್ ಇವರಿಗೆ ಹಸ್ತಾಂತರಿಸಿ ಮಾತನಾಡಿದರು.

ಸ್ಮಾರ್ಟ್ ಸಿಟಿ  ಯೋಜನೆಯಡಿ ಸುಮಾರು 65 ಲಕ್ಷ ರೂ.ಗಳನ್ನು ಇದಕ್ಕೆ  ವೆಚ್ಚ ಮಾಡಲಾಗುತ್ತಿದೆ.  ಆಲದ ಮರ ಪಾರ್ಕ್ ತುಮಕೂರಿನಲ್ಲಿ ಬಹಳ ಪ್ರಸಿದ್ಧ. ಹಲವಾರು ವರ್ಷಗಳಿಂದ ಇದನ್ನು ಕಾಪಾಡಿಕೊಂಡು ಬಂದಿದ್ದಾರೆ.  ಪ್ರೆಸ್ ಕ್ಲಬ್ ನವರ ಸಾಮಾಜಿಕ ಹೊಣೆಗಾರಿಕೆ ಹಾಗೂ ಪರಿಸರದ ಮೇಲಿನ ಪ್ರೀತಿ ಎದ್ದು ಕಾಣುತ್ತಿದೆ. ಇದನ್ನು ನಿರ್ವಹಣೆ ಮಾಡುವಾಗ ಬಹಳಷ್ಟು ಸಮಸ್ಯೆಗಳು ತನ್ನಿಂದ ತಾನೇ ಬಗೆಹರಿಯುತ್ತವೆ  ಎಂದು ಮುಖ್ಯಮಂತ್ರಿಗಳು ತಿಳಿದರು.

Related