ಸಿದ್ಧು ಸಿಎಂ ಆದ್ರೆ ತಾನೇ, ಕೊಟ್ಟ ಭರವಸೆಯನ್ನು ಈಡೇರಿಸುವುದು: ಬಿ.ಸಿ.ಪಾಟೀಲ್

ಮೈಸೂರು: ಸಿದ್ದರಾಮಯ್ಯ ಭ್ರಮೆಯಲ್ಲಿ ಬದುಕುತ್ತಿದ್ದಾರೆ. ಅವರು ಮುಖ್ಯಮಂತ್ರಿಯಾದ್ರೆ ತಾನೇ ಅವರು ಕೊಟ್ಟ ಭರವಸೆಯನ್ನು ಈಡೇರಿಸುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವ್ಯಂಗ್ಯವಾಡಿದ್ದಾರೆ.


ತಾನು ಸಿಎಂ ಆದರೆ ದಲಿತರ ಸಾಲ ಮನ್ನಾ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್​ನಲ್ಲಿ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲಿಸಲಾಗುತ್ತಿದೆ. ಬಿಜೆಪಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವುದು ನಿಶ್ಚಿತ. ಸಿದ್ದರಾಮಯ್ಯಗೆ ಬಿಜೆಪಿ ಬಗ್ಗೆ ಹೇಳಲು ಏನು ಇಲ್ಲ. ನಮ್ಮ ಸರ್ಕಾರದಿಂದ ಸಿದ್ದರಾಮಯ್ಯಗೆ ಪ್ರಯೋಜನ ಆಗುತ್ತಿಲ್ಲ. ಜನರಿಗೆ ಪ್ರಯೋಜನ ಆಗುತ್ತಿದೆ ಎಂದರು.
ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ರಸಗೊಬ್ಬರವನ್ನ ಸಬ್ಸಿಡಿ ದರದಲ್ಲಿ ಮಾರುತ್ತಿದ್ದೇವೆ. ಕೃತಕ ಅಭಾವ ಸೃಷ್ಟಿಸಿದರೆ ಅಂತಹವರ ಮೇಲೆಕಠಿಣ ಕ್ರಮ ಕೈಗೊಳ್ಳಲಾಗುತ್ತೆ. ಮಳೆಹಾನಿ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ವರದಿಯ ಆಧಾರದ ಮೇಲೆ ಪರಿಹಾರ ನೀಡಲಾಗುತ್ತೆ. ಮಳೆ ಹಾನಿ ಪ್ರದೇಶಗಳಿಗೆ ಅಧಿಕಾರಿಗಳಿಗೆ ಭೇಟಿ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು.

Related