ನ್ಯಾಯ ಕೊಡಿಸಿ ಎಂದು ಮೋದಿಗೆ ಪತ್ರ ಬರೆದ ಎಂಟು ಪಿಎಸ್ಐ ಅಭ್ಯರ್ಥಿಗಳು

ಬೆಂಗಳೂರು(ಮೇ.16): ಇಡೀ ದೇಶದಲ್ಲಿ ಸಂಚಲನ ಮೂಡಿಸಿದ್ದ ಪಿಎಸ್‌ಐ ಪರೀಕ್ಷಾ ಹರಗಣ ಸಂಬಂಧ ದಿನನಿತ್ಯ ಒಂದಿಲ್ಲೊಂದು ಬೆಳವಣಿಗೆಗಳಾಗುತ್ತಿವೆ. ಅಕ್ರಮದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆಂದು ತನಿಖೆ ನಡೆಯುತ್ತಿದ್ದು, ಈ ಎಲ್ಲಾ ವಿಚಾರಗಳ ಮಧ್ಯೆ ಪರಿಧಶ್ರಮಪಟ್ಟು ಓದಿ, ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರುವವರಿಗೆ ಅನ್ಯಾಯ ಮಾಡಬೇಡಿ ಎಂದು ಅನೇಕ ಅಭ್ಯರ್ಥಿಗಳು ಧ್ವನಿ ಎತ್ತಿದ್ದಾರೆ. ಆದರೆ ಸರ್ಕಾರ ಈ ಮಾತುಗಳನ್ನು ಕಿವಿಗೆ ಹಾಕಿಕೊಂಡಿಲ್ಲ. ಈ ನಡೆಯಿಂದ ಬೇಸತ್ತ ಅಭ್ಯರ್ಥಿಗಳು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಜೊತೆಗೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ.

ಹೌದು ಪಿಎಸ್ಐ ಅಕ್ರಮ ಪರೀಕ್ಷಾ ಹಗರಣದಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ರಕ್ತದಲ್ಲಿ ಬರೆದ ಈ ಪತ್ರ ಸುಮಾರು 2 ಪುಟಗಳಷ್ಟಿದೆ. ಈ ಮೂಲಕ ಅಭ್ಯರ್ಥಿಗಳು ತಮಗೆ ನ್ಯಾಯ ಒದಗಿಸಿಕೊಡುವಂತೆ ಪ್ರಧಾನಿಗೆ ಮನವಿ ಮಾಡಿದ್ದಾರೆ. ಈ ಪತ್ರವೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪಿಎಸ್ಐ ಪರೀಕ್ಷೆಯ ಆಯ್ಕೆಯಲ್ಲಿ ಮೋಸ ಹೊದವರಿಗೆ ನ್ಯಾಯ ಸಿಗಬೇಕು, ಅನ್ಯಾಯ ಮಾಡಿದವರನ್ನ ಜೈಲಿಗೆ ಹಾಕಬೇಕು. ಆದರೆ ನಿಯತ್ತಿನಿಂದ, ಪ್ರಾಮಾಣಿಕವಾಗಿ ಬರೆದು ಪಾಸಾದವರಿಗೆ ಮೋಸವಾಗಬಾರದು. 2021ರಲ್ಲಿ ನಡೆದ ಎಫ್‌ಡಿಎ ಪರೀಕ್ಷೆಯಲ್ಲಿ ಕೂಡ ಅಕ್ರಮವಾಗಿದೆ. ಅದನ್ನು ಕೂಡ ತನಿಖೆ ಮಾಡಿನ್ಯಾಯ ಕೊಡಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ, ಅವರು ಸೂಕ್ತ ತನಿಖೆಗೆ ಆದೇಶ ಮಾಡಿ, ನಮಗೆ ನ್ಯಾಯ ಕೊಡಿಸುತ್ತಾರೆಂಬ ನಂಬಿಕೆ ಇದೆ ಎಂದು ಪತ್ರದಲ್ಲಿ ಬರೆಯಲಾಗಿದೆ.

Related