ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು- ಮುಖ್ಯಮಂತ್ರಿ

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು- ಮುಖ್ಯಮಂತ್ರಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು.

ನರೇಂದ್ರ ಮೋದಿಯವರು ಸರಿಯಾದ ವ್ಯಕ್ತಿಗೆ ಜನಸೇವೆಯ ಅವಕಾಶ ಕೊಟ್ಟರೆ ಏನನ್ನು ಸಾಧಿಸಬಹುದು ಎಂದು ತೋರಿಸಿದ್ದಾರೆ. ಒಬ್ಬ ದಕ್ಷ ಆಡಳಿತಗಾರನಾಗಿ ಜನರಿಗೆ ನ್ಯಾಯ ಸಮ್ಮತ ಹಕ್ಕುಗಳನ್ನು ಒದಗಿಸಿದ್ದಾರೆ. ಒಬ್ಬ ದಿಟ್ಟನಾಯಕನಾಗಿ ದೇಶದ ಗಡಿ ರಕ್ಷಣೆ ಮಾಡಿದ್ದಾರೆ. ದೂರ ದೃಷ್ಟಿಯ ನಾಯಕನಾಗಿ ಇತರ ರಾಷ್ಟ್ರಗಳು ಭಾರತವನ್ನು ಗೌರವದಿಂದ ಕಾಣುವಂತೆ ಮಾಡಿದ್ದಾರೆ.  ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಮೂಲಕ ಸುಶಾಸನವನ್ನು ಸಾಧ್ಯವಾಗಿಸಿದ್ದಾರೆ. ಜನಸಂಖ್ಯೆ ದೇಶಕ್ಕೆ ಮಾರಕ ಎಂಬ ಅಭಿಪ್ರಾಯವನ್ನು ಬದಲಿಸಿ, ಮಾನವ ಸಂಪನ್ಮೂಲ ದೇಶದ ಶಕ್ತಿ ಎಂದು ತೋರಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ನಾವು ಈಗ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದು ಒಂದು ಸುಸಂದರ್ಭ. ಕಳೆದ ೭೫ ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿರುವುದೇ ನಮ್ಮ ದೇಶದ ದೊಡ್ಡ ಸಾಧನೆ. ಆದರೆ ತುರ್ತು ಪರಿಸ್ಥಿತಿ ಘೋಷಣೆ ನಮ್ಮ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿದಿದೆ. ತುರ್ತುಪರಿಸ್ಥಿತಿಯ ವಿರುದ್ಧ ಜನಾಂದೋಲನ ನಡೆಸಿ, ಪ್ರಜಾಪ್ರಭುತ್ವವನ್ನು ಮರುಸ್ಥಾಪನೆ ಮಾಡಿರುವುದು, ನಮ್ಮ ಪ್ರಜಾಪ್ರಭುತ್ವದ ಅಂತಃಶಕ್ತಿಗೆ ಸಾಕ್ಷಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ರಘುನಾಥ್ ಮಲ್ಕಾಪುರೆ ಸಚಿವರಾದ ಗೋವಿಂದ ಕಾರಜೋಳ, ಎಸ್ ಟಿ ಸೋಮಶೇಖರ್, ಶಶಿಕಲಾ ಜೊಲ್ಲೆ, ಬಿ.ಸಿ. ನಾಗೇಶ್, ವಿ. ಸೋಮಣ್ಣ, ಆರಗ ಜ್ಞಾನೇಂದ್ರ, ಸಂಸದ ಪಿ.ಸಿ. ಮೋಹನ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಗ್ರಾಮೀಣಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

Related