ಬಿಜೆಪಿ ಅಭ್ಯಾರ್ಥಿಯಾಗಿ ನಾಮಪತ್ರ ಸಲ್ಲಿಕೆ : ನಿರ್ಮಲಾ ಸೀತಾರಾಮನ್

ಬಿಜೆಪಿ ಅಭ್ಯಾರ್ಥಿಯಾಗಿ ನಾಮಪತ್ರ ಸಲ್ಲಿಕೆ : ನಿರ್ಮಲಾ ಸೀತಾರಾಮನ್

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ತೋಟಗಾರಿಕೆ ಸಚಿವ ಮುನಿರತ್ನ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

Related