ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ: ಡಿಸಿಎಂ

ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ: ಡಿಸಿಎಂ

ಬೆಂಗಳೂರು: ಬಿಜೆಪಿಯವರು ದೇವರ ಹೆಸರಲ್ಲಿ ಗುಂಡಾಗಿರಿ ಮಾಡುತ್ತಿದ್ದಾರೆ. ಒಂದು ಕೈಯಲ್ಲಿ ಮಂತ್ರಾಕ್ಷತೆ ಹೇಳಿದರೆ ಹಿಡಿದರೆ ಇನ್ನೊಂದು ಕೈಯಲ್ಲಿ ದೊಣ್ಣೆ ಹಿಡಿಯುತ್ತಾರೆ ಎಂದು  ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬಿಜೆಪಿಯವರ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರ ಗಡ್ಡ ಬೆದರಿಕೆಗೆ ನಮ್ಮ ಕಾಂಗ್ರೆಸ್ ಸರ್ಕಾರದಿಂದ ನಾಯಕರಾದ ಹೆದರುವುದಿಲ್ಲ ಎಂದು ಹೇಳಿದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಯ ಮೇಲೆ ನಡೆದಿರುವ ದಾಳಿ ಖಂಡಿಸಿ ಇಂದು ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾತನಾಡಿದ ಅವರು, ಧರ್ಮದ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯವರು ಧರ್ಮದ ವಿಚಾರವಾಗಿ ರಾಜಕಾರಣ ಮಾಡುತ್ತಿದ್ದಾರೆ. ಹೀಗಾಗಿ ಅವರು ಒಂದು ಕೈಯಲ್ಲಿ ಮಂತ್ರಾಕ್ಷತೆ ಹಿಡಿದರೆ, ಮತ್ತೊಂದು ಕೈಯಲ್ಲಿ ದೊಣ್ಣೆ ಹಿಡಿದು ಜನಪರ ಧ್ವನಿ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕಾರಣ ಇರಬಾರದು. ನೀವು ಧರ್ಮವನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದ್ದರೂ ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುತ್ತಿಲ್ಲ ಎಂದು ಗುಡುಗಿದರು.

 

Related