ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ: ರೇವಂತ್ ರೆಡ್ಡಿ

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ: ರೇವಂತ್ ರೆಡ್ಡಿ

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಇದರ ನಡುವೆ ಮುಸ್ಲಿಂ ಮೀಸಲಾತಿ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರಿ ಗ್ರಾಸವಾಗಿ ಚರ್ಚೆಯಾಗುತ್ತಿದೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯಿಸಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ಮುಂದಿನ ದಿನಗಳಲ್ಲಿ ಹಿಂದುಳಿದ ಸಮುದಾಯಗಳಿಗೆ ಮೀಸಲಾತಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಬಿಜೆಪಿ ಯೋಜಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ವರ್ಷವಾದ 2025 ರ ವೇಳೆಗೆ ಮೀಸಲಾತಿಯನ್ನು ರದ್ದುಗೊಳಿಸಲಿದೆ ಎಂದು ರೇವಂತ್ ರೆಡ್ಡಿ ಹೇಳಿದ್ದಾರೆ. 2025ರ ವೇಳೆಗೆ ಆರ್‌ಎಸ್‌ಎಸ್‌ 100 ವರ್ಷ ಪೂರೈಸಲಿದೆ. 2025ರ ವೇಳೆಗೆ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತು ಹಾಕಲು ಪ್ರಯತ್ನ ಮಾಡುತ್ತಿದೆ. ಹಲವು ಬಾರಿ ಆರೆಸ್ಸೆಸ್ ಮತ್ತು ಬಿಜೆಪಿ ನಾಯಕರು ಮೀಸಲಾತಿ ಕುರಿತು ಪ್ರತಿಕ್ರಿಯಿಸಿದ್ದಾರೆ,’’ ಎಂದು ಗುರುವಾರ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

 

Related