ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಲ್ಲಿ ಬಿಜೆಪಿ..

ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಲ್ಲಿ ಬಿಜೆಪಿ..

ಬಿಜೆಪಿ ನಾಯಕರೇ ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಶನಿವಾರ ಕರೆ ನೀಡಿದ್ದಾರೆ. ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ ಎಂದು ಅವರು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವೆಬ್ಸೈಟ್ನಲ್ಲಿ ಹಿಂದಿ ಪೋಸ್ಟರ್ಗಳನ್ನು ಹಾಕಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆಕ್ರೊಶ ವ್ಯಕ್ತಪಡಿಸಿದ್ದರು. ಇದರ ನಂತರ ಎಚ್ಚೆತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅದನ್ನು ಡಿಲೀಟ್ ಮಾಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, “ನಾನು ಚಾಟಿ ಬೀಸಿದ ನಂತರ ಸರ್ಕಾರ ಎಚ್ಚೆತ್ತುಕೊಂಡು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾಲತಾಣದಲ್ಲಿ ಅನಗತ್ಯವಾಗಿ ತುರುಕಿದ್ದ ಹಿಂದಿಯನ್ನು ಕಿತ್ತೊಗೆದಿದೆ. ಕರ್ನಾಟಕದ ಬಿಜೆಪಿ ನಾಯಕರೇ, ನಾನೊಬ್ಬ ಕನ್ನಡಿಗ ಎಂಬ ಸ್ವಾಭಿಮಾನವನ್ನು ನೀವೇ ಬೆಳೆಸಿಕೊಳ್ಳಬೇಕು, ಇದು ನಾವು ಹೇಳಿ ಬರುವಂತದ್ದಲ್ಲ. ಹಿಂದಿ ರಾಷ್ಟ್ರಭಾಷೆ ಎಂಬ ಭ್ರಮೆಯಿಂದ ಹೊರಬನ್ನಿ” ಎಂದು ಕರೆ ನೀಡಿದ್ದಾರೆ.

Related