ಬಿಜೆಪಿ- ಜೆಡಿಎಸ್ ಮೈತ್ರಿ ಸರಿಯಲ್ಲ

ಬಿಜೆಪಿ- ಜೆಡಿಎಸ್ ಮೈತ್ರಿ ಸರಿಯಲ್ಲ

ಬೆಂಗಳೂರು : ವಿಧಾನಪರಿಷತ್‌ನ ಉಪಸಭಾಪತಿ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಜಾತ್ಯಾತೀತ ತತ್ವ ಪಾಲಿಸುತ್ತೇವೆ ಎಂದು ಜೆಡಿಎಸ್ ನಾಯಕರು ಹೇಳುತ್ತಾರೆ. ಮೈತ್ರಿ ಸರ್ಕಾರದ ಅವಧಿಯಲ್ಲಿ ಬಿಜೆಪಿಯವರು ಎಷ್ಟು ತೊಂದರೆ ಕೊಟ್ಟಿದ್ದಾರೆ ಎಂಬುದು ಗೊತ್ತಿದೆ. ಆದರೂ ಈಗ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ.ಇದು ಸರಿಯಾದ ಬೆಳವಣಿಗೆಯಲ್ಲ.ರಾಜಕೀಯದಲ್ಲಿ ಯಾವಾಗ ಏನೂ ಬೇಕಾದರೂ ಆಗಬಹುದು ಎಂದರು.

ಶಾಸಕ ಅಖಂಡ ಶ್ರೀನಿವಾಸ್‌ಮೂರ್ತಿ ಅವರ ಮನೆಗೆ ಬೆಂಕಿ ಬಿದ್ದ ವಿಚಾರವನ್ನು ಖಂಡಿಸುತ್ತೇನೆ. ಅಖಂಡ ಶ್ರೀನಿವಾಸ್ ಮೂರ್ತಿ ಅವರ ಜೊತೆ ನಾವೆಲ್ಲರೂ ಇದ್ದೇವೆ. ಒಬ್ಬ ಭಿಕ್ಷುಕರ ಮನೆಗೇ ಬೆಂಕಿ ಬಿದ್ದರೂ ಅದನ್ನು ನಾವು ಖಂಡಿಸುತ್ತೇವೆ. ಬೆಂಕಿ ಬಿದ್ದ ಪ್ರಕರಣದಲ್ಲಿ ಸಿಕ್ಕ ಸಿಕ್ಕವರನ್ನು ಬಂಧಿಸಲಾಗುತ್ತಿದೆ ಎಂದು ಆರೋಪಿಸಿದರು.

ವಿಧಾನಸಭೆಯ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ಆದ ತೀರ್ಮಾನಗಳು ಅನುಷ್ಠಾನವಾಗುತ್ತಿಲ್ಲ. ಹಾಗಾಗಿ ನಾವು ಸಭೆಯಿಂದ ಹೊರಗುಳಿದಿದ್ದೆವು ಎಂದು ಸಮರ್ಥಿಸಿಕೊಂಡರು. ಅಧಿವೇಶನ ಯಾವ ರೀತಿ ನಡೆಯಬೇಕು ಎಂಬುದರ ಬಗ್ಗೆ ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾಗುತ್ತದೆ. ಕಳೆದ ಅಧಿವೇಶನದಲ್ಲಿ ಆದ ತೀರ್ಮಾನವೇ ಬೇರೆ. ಸದನದಲ್ಲಿ ಸರ್ಕಾರ ನಡೆದುಕೊಂಡ ರೀತಿಯೇ ಬೇರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Related