ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ನಿಧನ

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಬಹುದಿನಗಳಿಂದ ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಅವರು ಇಂದು ರಾತ್ರಿ ಸುಮಾರು 1: 20ಕ್ಕೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.

ಶ್ರೀನಿವಾಸ್ ಅವರಿಗೆ 76 ವಯಸ್ಸಾಗಿದ್ದು ವಯೊ ಸಹಜ ಕಾಯಿಲೆಯಿಂದ ಈಗಾಗಲೇ ಕಳೆದ ಮೂರು ದಿನಗಳ ಹಿಂದೇನೆ ಬೆಂಗಳೂರಿನಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇನ್ನು ಇಂದು ಮಧ್ಯರಾತ್ರಿ ಹೃದಯಗತದಿಂದ ಸಾವನ್ನು ಒಪ್ಪಿದ್ದಾರೆ ಎಂದು ಮಣಿಪಾಲ್ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ: ಕೋದಂಡರಾಮ ಸ್ವಾಮಿ ಬ್ರಹ್ಮರಥೋತ್ಸವದ ಅಂಗವಾಗಿ ರಾಮನವಮಿ ಆಚರಣೆ

ಇನ್ನು ಮಣಿಪಾಲ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರಿಗೆ ಪತ್ನಿ ಹಾಗೂ ಮೂವರು ಹೆಣ್ಣು ಮಕ್ಕಳಿದ್ದಾರೆ. ಪತ್ನಿ ಭಾಗ್ಯಲಕ್ಷ್ಮಿ ಪ್ರಸಾದ್, ಪುತ್ರಿಯರಾದ ಪ್ರತಿಮಾ ಪ್ರಸಾದ್, ಪೂರ್ಣಿಮಾ ಪ್ರಸಾದ್, ಪೂನಂ ಪ್ರಸಾದ್.

ಮೈಸೂರಿನ ಅಶೋಕಪುರಂ ಶಾಲಾ ಆವರಣದಲ್ಲಿ ಬೆಳಗ್ಗೆ 11.30ರಿಂದ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂಬೇಡ್ಕರ್​ ಟ್ರಸ್ಟ್​​ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

 

Related