ರೈತರಿಗೆ ಕೊಟ್ಟ ಬರಸೆಯನ್ನು ಬಿಜೆಪಿ ಪಕ್ಷ ಈಡೇರಿಸಿಲ್ಲ: ಯತೀಂದ್ರ  

ರೈತರಿಗೆ ಕೊಟ್ಟ ಬರಸೆಯನ್ನು ಬಿಜೆಪಿ ಪಕ್ಷ ಈಡೇರಿಸಿಲ್ಲ: ಯತೀಂದ್ರ  

ಮೈಸೂರು: ಕರ್ನಾಟಕ ರಾಜ್ಯದಲ್ಲಿ ಬಡವರ ಪರ ಕಾರ್ಯನಿರ್ವಹಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಮ್ಮ ಮತ ನೀಡಿ ಎಂದು ಯತಿಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೈಸೂರು ಲೋಕಸಭಾ ಚುನಾವಣೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂ ಲಕ್ಷ್ಮಣ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಪಕ್ಷಕ್ಕೆ ಮತದಾನ ಮಾಡಬೇಕು ಎಂಬುದನ್ನು ಜನರು ನಿರ್ಧರಿಸಬೇಕು. ಯಾವ ಪಕ್ಷ ಹೆಚ್ಚು ಬಡವರ ಪರವಾಗಿ ಕೆಲಸ ಮಾಡಿದೆ ಅವರಿಗೆ ಮತದಾನ ಮಾಡಿ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಏನು ಕೆಲಸ ಮಾಡಿದ್ದಾರೆ ಎಂಬುದನ್ನು ಗಮನದಲ್ಲಿ ಇಟ್ಟುಕೊಂಡು ಮತ ನೀಡಿ ಎಂದರು.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದಕ್ಕಿಂತ ಮುಂಚೆ ರೈತರಿಗೆ ಭರವಸೆಯನ್ನು ನೀಡಿದ್ದರು. ಆ ಭರವಸೆಗಳನ್ನು ಇಲ್ಲಿಯವರಿಗಾದರೂ ಕೂಡ ನೆರವೇರಿಸಿಲ್ಲ. ರಾಜ್ಯದಲ್ಲಿ ಮಳೆ ಬಾರದಿದ್ದ ಕಾರಣ ಬರಗಾಲ ಪರಿಸ್ಥಿತಿ ಬಂದಿದೆ.

ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರಗಾಲ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದರು ಕೂಡ ಇಲ್ಲಿಯವರೆಗೂ ಕೇಂದ್ರ ಸರ್ಕಾರದಿಂದ ನಯಾಪಯ ಕೂಡ ರಾಜ್ಯದ ರೈತರಿಗೆ ಒದಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು

ಇನ್ನು ರೈತರ ಆದಾಯ ಹೆಚ್ಚು ಆಗಿಲ್ಲ. ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಬಿಜೆಪಿ ವಿರುದ್ದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಯುವಕರಿಗೆ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ  ಬಂದ ಮೇಲೆ ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದರು.

 

Related