ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಲೋಕಸಭಾ ಚುನಾವಣೆ ಮುಗಿದ ನಂತರ ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವುದರಿಂದ ಬಿಜೆಪಿಯು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿದೆ.

ಇಂದು (ಶನಿವಾರ ಜೂನ್ 29) ರಂದು ರಾಜ್ಯದಾದ್ಯಂತ ಬಿಜೆಪಿ ಪಕ್ಷವು ಹಾಲಿನ ದರ ಏರಿಕೆ ಮಾಡಿರುವುದರಿಂದ ಬೃಹತ್ ಪ್ರತಿಭಟನೆಯನ್ನು ಕೈಗೊಂಡಿದೆ. ಕೂಡಲೆ ಹಾಲಿನ ದರವನ್ನು ಕಡಿಮೆ ಮಾಡಬೇಕು ಇಲ್ಲದಿದ್ದರೆ ನಾವು ಉಗ್ರ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 3ರಂದು ಬಿಜೆಪಿ ಸಿಎಂ ಮನೆಗೆ ಮುತ್ತಿಗೆ..!

ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಸುಗಳೊಂದಿಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಂಎಲ್‌ಸಿ ಹಾಗೂ ಪರಿಷತ್‌ನ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಮಾತನಾಡಿ, ಬೆಲೆ ಏರಿಕೆಯಿಂದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಮೇಲೆ ದುಷ್ಪರಿಣಾಮ ಬೀರುವ ನೀತಿಯನ್ನು ಸರಕಾರ ಬದಲಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಸ್ಥಗಿತಗೊಂಡಿರುವ ಕಿಸಾನ್ ಸಮ್ಮಾನ್ ನಿಧಿಯಡಿ ರೈತರಿಗೆ 4 ಸಾವಿರ ರೂ.ಗಳನ್ನು ಆರ್ಥಿಕ ನೆರವನ್ನು ಸರ್ಕಾರ ಪ್ರಾರಂಭಿಸಬೇಕು. ಕಳೆದ 8 ತಿಂಗಳಿನಿಂದ ರೂ.957 ಕೋಟಿ ಹಾಲಿನ ಬಾಕಿಯಿದ್ದು, ರೈತರ ಹಿತದೃಷ್ಟಿಯಿಂದ ಅದನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು.

 

Related