ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಚುನಾವಣೆ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ನವದೆಹಲಿ : ಮುಂಬರುವ ಅಸ್ಸಾಂ, ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ೨೦೨೧ರ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬುಧವಾರ ಬಿಡುಗಡೆಗೊಳಿಸಿದೆ.

ಅಸ್ಸಾಂ ನಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಕೇಂದ್ರ ಸಚಿವರು ಇದ್ದಾರೆ.

ಕೇಂದ್ರ ಸಚಿವ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ನರೇಂದ್ರ ಸಿಂಗ್ ತೋಮರ್, ಸ್ಮೃತಿ ಇರಾನಿ, ಅರ್ಜುನ್ ಮುಂಡಾ, ಜಿತೇಂದ್ರ ಸಿಂಗ್, ಮುಖ್ತಾರ್ ಅಬ್ಬಾಸ್ ನಖ್ವಿ, ಅನುರಾಗ್ ಸಿಂಗ್ ಠಾಕೂರ್, ಬಿಎಲ್ ಸಂತೋಷ್, ಬೈಜಯಂತ್ ಜಯ್ ಪಾಂಡಾ, ದಿಲೀಪ್ ಸೈಕಿಯಾ, ಶಾ ನವಜ್ ಹುಸೇನ್, ಪೂನಂ ಮಹಾಜನ್, ಮನೋಜ್ ತಿವಾರಿ, ರವಿ ಕಿಶನ್ ಮತ್ತು ಲಾಕೆಟ್ ಚಟರ್ಜಿ ಅವರ ಹೆಸರುಗಳು ಪಕ್ಷದ ತಾರಾ ಪ್ರಚಾರಕರ ಪಟ್ಟಿಯಲ್ಲಿವೆ.

ಇನ್ನು ಪಶ್ಚಿಮ ಬಂಗಾಳದ ಸ್ಟಾರ್ ಪ್ರಚಾರ ಹೆಸರು ಸಹ ಬಿಡುಗಡೆಗೊಳಿಸಿದ್ದು ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ರಾಜನಾಥ್ ಸಿಂಗ್, ಸ್ಮೃತಿ ಇರಾನಿ ಸೇರಿದಂತೆ ಇನ್ನು ಹಲವರು ಪ್ರಚಾರ ನಡೆಸಲಿದ್ದಾರೆ.

Related