ಖಾಸಗಿ ಶಾಲೆ ಜೊತೆ ಬಿಜೆಪಿ ಷಾಮೀಲು

ಖಾಸಗಿ ಶಾಲೆ ಜೊತೆ ಬಿಜೆಪಿ ಷಾಮೀಲು

ಬೆಂಗಳೂರು : ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆಗೆ ಷಾಮೀಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.

ಖಾಸಗಿ ಶಾಲೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲದಂತಾಗಿದೆ. ತರಗತಿಗಳಿಲ್ಲದೆ ಇದ್ದರೂ ಪೋಷಕರಿಂದ ಪೂರ್ಣಶುಲ್ಕ ವಸೂಲಿ ಮಾಡಲಾಗುತ್ತಿದೆ. ಇದಕ್ಕಾಗಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿ ಪೋಷಕರನ್ನು ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಸರ್ಕಾರ ಕಣ್ಣುಮುಚ್ಚಿಕೊಂಡು ಕೂತಿದೆ. ಪಠ್ಯೇತರ ಶುಲ್ಕ ವಸೂಲಿಗೆ ಹೊರಟಿರುವ ಖಾಸಗಿ ಶಾಲೆಗಳು ಸರ್ಕಾರದ ಪೊಳ್ಳು ಬೆದರಿಕೆಗೆ ಜಗ್ಗುತ್ತಿಲ್ಲ ಎಂದಿದ್ದಾರೆ.

ತಕ್ಷಣ ಸಚಿವ ಸುರೇಶ್ ಕುಮಾರ್ ಖಾಸಗಿ ಶಾಲೆಗಳು ಮತ್ತು ಪೋಷಕರ ಸಭೆ ಕರೆದು ಪಾರದರ್ಶಕವಾಗಿ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

Related