ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ಇನ್ನೂ ಸರಿಯಾಗಿ ಯಾವುದೇ ಮಾಹಿತಿ ತಿಳಿಯದಿದ್ದ ಕಾರಣ ಬಿಜೆಪಿಯವರು ಇದನ್ನು ರಾಜಕೀಯಕ್ಕೆ ಬಳಸಬಾರದು, ಕರ್ನಾಟಕ ರಾಜ್ಯ ಶಾಂತಿಯಿಂದ ಇದೆ, ಶಾಂತಿಯಿಂದ ಇರುವುದಕ್ಕೆ ಬಿಜೆಪಿ ಅವರು ಸಹಕಾರ ನೀಡಬೇಕೆಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳು ಚುರುಕಿನ ಕಾರ್ಯಾಚರಣೆ ನಡೆಸಿದ್ದು, ಈ ಹತ್ಯೆಯಲ್ಲಿ ಯಾರೇ ಭಾಗಿಯಾಗಿದ್ದರು ಅವರನ್ನು ರಕ್ಷಿಸುವ ಮಾತೇ ಇಲ್ಲ. ಯಾರೇ ಆದರೂ ಅವರಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ ಎಂದರು. ಇದನ್ನೂ ಓದಿ: UTK ಗೆ ಮಾತ್ರವಲ್ಲ, ನನಗೂ ಜೀವ ಬೆದರಿಕೆ ಕರೆ ಬಂದಿವೆ: ಸಿಎಂ
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪದಕ್ಕೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.