ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ ಹೊಸ ಪ್ಲಾನ್!

ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ ಹೊಸ ಪ್ಲಾನ್!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ಪ್ರಾರಂಭಗೊಂಡಿದ್ದು ಕಾಂಗ್ರೆಸ್ ಗೆ ಟಕ್ಕರ್ ಕೊಡಲು ಬಿಜೆಪಿ ಭೀಮ ಸಮಾವೇಶವನ್ನು ಕೈಗೊಳ್ಳಲು ಮುಂದಾಗಿದೆ ಎಂದು ತಿಳಿದು ಬಂದಿದೆ.

ಹೌದು, ರಾಜ್ಯದಲ್ಲಿರುವ ದಲಿತರನ್ನು ಸಳೆಯಲು ಬಿಜೆಪಿ ಪಕ್ಷ ಮುಂದಾಗಿದ್ದು, ಈ ತಿಂಗಳಿನಿಂದಲೇ ಭೀಮ ಸಮಾವೇಶವನ್ನು ಕೈಗೊಳ್ಳಲು ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ ನಡೆಸಲು ಬಿಜೆಪಿ ನಿರ್ಧಾರ ಮಾಡಿದೆ. ರಾಜ್ಯದಲ್ಲಿ ಈ ತಿಂಗಳಲ್ಲೇ ಜಿಲ್ಲಾ ಮಟ್ಟದಲ್ಲಿ ಭೀಮ ಸಮಾವೇಶ ನಡೆಸಲು ತಯಾರಿ ಶುರು ಮಾಡಿದೆ.

ಲೋಕಸಭಾ ಚುನಾವಣೆಗೆ ದಲಿತ ಮತಗಳನ್ನು ಸೆಳೆಯಲು ತಂತ್ರ ಹೆಣೆಯುತ್ತಿದೆ. ಕಾಂಗ್ರೆಸ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಕೂಡ ಸಮಾವೇಶ ನಡೆಸಲು ಮುಂದಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ ಎಲ್ಲ ಸ್ಥಾನಗಳನ್ನು ಗೆದ್ದು, ಮೋದಿಯವರ ಕೈ ಬಲಪಡಿಸಲಿದೆ ಎಂದು ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೆ ದೃಷ್ಟಿಯಿಂದ ರಾಜ್ಯ ಪ್ರವಾಸದ ವೇಳೆ ಪ್ರಮುಖರ ಜೊತೆಗೆ ಮಾತನಾಡುವೆ. ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬಬೇಕು ಎಂದು ಬಿಎಸ್‌ವೈ ಮನವಿ ಮಾಡಿದರು.

 

Related