ಗದಗ : ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ನಿವಾಸಿ ಅಲ್ಲಾಸಾಬ್ ತಾಳಕೇರಿ ಮನೆಯಲ್ಲಿ ನೇಣುಹಾಕಿಕೊಂಡು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನ ಬಿಎಂಟಿಸಿಯಲ್ಲಿ ಚಾಲಕ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ಅಲ್ಲಾಸಾಬ್ ತಾಳಕೇರಿ (40) ಎನ್ನುವವರು. ಬೆಂಗಳೂರಿನ ಉತ್ತರ ಹಳ್ಳಿಯ 33 ನೇ ಡಿಪೋದಲ್ಲಿ ಚಾಲಕ ಕಂಡಕ್ಟರ್ ಆಗಿ ಅಲ್ಲಾಸಾಬ್ ಕೆಲಸ ಮಾಡುತ್ತಿದ್ದರು. ಸಾರಿಗೆ ಮುಷ್ಕರದ ಹಿನ್ನೆಲೆಯಲ್ಲಿ ಕಳೆದ ನಾಲ್ಕು ದಿನಗಳ ಹಿಂದೆ ನಿಡಗುಂದಿ ಗ್ರಾಮಕ್ಕೆ ಬಂದಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಈ ಕುರಿತು ನರೇಗಲ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.