ಬಾಂಬ್ ಸ್ಫೋಟ: ಗಾಯ

ಬಾಂಬ್ ಸ್ಫೋಟ: ಗಾಯ

ನವದೆಹಲಿ,ಫೆ. 10 : ಪಾಟ್ನಾದ ಗಾಂಧಿ ಮೈದಾನ ಪ್ರದೇಶದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಮೈದಾನದ ಬಳಿ ಸ್ಫೋಟಗೊಂಡ ಪರಿಣಾಮ ಸ್ಥಳದ ಸಮೀಪವಿರುವ ಎರಡು ಮನೆಗಳೂ ಕೂಡ ಧ್ವಂಸಗೊಂಡಿವೆ ಎಂದು ವರದಿಗಳು ತಿಳಿಸಿವೆ. ಸ್ಫೋಟಕ್ಕೆ ಯಾವುದೇ ಕಾರಣಗಳೂ ತಿಳಿದುಬಂದಿಲ್ಲ. ಪ್ರಸ್ತುತ ಸ್ಥಳಕ್ಕಾಗಮಿಸಿರುವ ಭದ್ರತಾಸಿಬ್ಬಂದಿಗಳು ತನಿಖೆ ಆರಂಭಿಸಿದ್ದಾರೆ.
ಮನೆಯಲ್ಲಿಯೇ ಬಾಂಬ್ ಇಟ್ಟು ಸ್ಫೋಟಿಸಲಾಗಿದೆ ಎಂದೆನಿಸುತ್ತಿದೆ. ಘಟನೆಯಲ್ಲಿ ಎರಡು ಮನೆಗಳು ಧ್ವಂಸಗೊಂಡಿದ್ದು, ಹಲವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಾಟ್ನಾ ಪೊಲೀಸರು ಮಾಹಿತಿ ನೀಡಿದ್ದಾರೆ.

Related