ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಬಾಂಬ್ ಬೆದರಿಕೆ ಕರೆ

ಬೆಂಗಳೂರಿನಲ್ಲಿ ಮತ್ತೆ ಸದ್ದು ಮಾಡಿದ ಬಾಂಬ್ ಬೆದರಿಕೆ ಕರೆ

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿಗೆ ಇತ್ತೀಚಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗಿ ಕಂಡುಬರುತ್ತಿದ್ದು, ಈ ಹಿಂದೆ ರಾಜ ಭವನ ಶಾಲಾ-ಕಾಲೇಜು ಮತ್ತಿನ್ನಿತರ ಸ್ಥಳಗಳಿಗೆ ಬಾಂಬ್ ಇಡುವುದಾಗಿ ಬೆದರಿಕೆಯ ಇ-ಮೇಲ್ ಮತ್ತು ಕರೆಗಳು ಬಂದಿದ್ದವು. ಅದರಂತೆ ಇಂದು ಕೂಡ ಬೆಂಗಳೂರು ನಗರದಲ್ಲಿರುವ ಆರು ಪ್ರತಿಷ್ಠಿತ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನೂ ಓದಿ: ಮಾಡದ ತಪ್ಪಿಗೆ ಶಿಕ್ಷೆ; ಕಣ್ಣೀರಿಟ್ಟ ರೇವಣ್ಣ ..!

ಹೌದು, ನಗರದ 6 ಖಾಸಗಿ ಆಸ್ಪತ್ರೆಗಳಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಅದು ಸುಳ್ಳು ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಬಂದ ಆಸ್ಪತ್ರೆಗಳಲ್ಲಿ ಶ್ವಾನ ಮತ್ತು ಬಾಂಬ್ ನಿಷ್ಕ್ರಿಯ ತಂಡಗಳೊಂದಿಗೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದರು. ಆದಾಗ್ಯೂ, ಈ ಆಸ್ಪತ್ರೆಗಳ ಆವರಣದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ”ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಅವರು ಹೇಳಿದರು. ಭಾನುವಾರದಂದು ಆಸ್ಪತ್ರೆಗಳಿಗೆ ಇಮೇಲ್ ಬಂದಿದ್ದು, ಅದರಲ್ಲಿ ನಾನು ನಿಮ್ಮ ಕಟ್ಟಡದಲ್ಲಿ ಸ್ಫೋಟಕ ಸಾಧನಗಳನ್ನು ಇರಿಸಿದ್ದೇನೆ. ಮುಂದಿನ ಕೆಲವೇ ಗಂಟೆಗಳಲ್ಲಿ ಅವು ಸ್ಫೋಟಗೊಳ್ಳುತ್ತವೆ ಎಂದು ಈ ಮೇಲ್ ಬಂದಿತ್ತು. ಆದರೆ ಇದು ಉಸಿ ಬಾಂಬ್ ಕರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ..

 

Related