ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 44 ಶಾಲೆಗಳಿಗೆ ಶುಕ್ರವಾರ ಬೆದರಿಕೆಯ ಕರೆ ಬಂದಿರುವುದರಿಂದ ಪೊಲೀಸ ಅಧಿಕಾರಿಗಳು ಹೈ ಅಲಾರ್ಟ್ ಆಗಿ ತಪಾಸಣೆ ಮಾಡುತ್ತಿದ್ದಾರೆ.
ಇನ್ನು ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಮುನಿರತ್ನ ಅವರು, ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ವಿವಾದವನ್ನು ಸೃಷ್ಟಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ’ ಎಂದು ಹೇಳಿದರು.