ರೋಣದಲ್ಲಿ ಬೊಮ್ಮಾಯಿ ಬಿರುಸಿನ ಪ್ರಚಾರ

ರೋಣದಲ್ಲಿ ಬೊಮ್ಮಾಯಿ ಬಿರುಸಿನ ಪ್ರಚಾರ

ರೋಣ: ಹಾವೇರಿ ಮತ್ತು ಗದಗ ಲೋಕಸಭಾ ಚುನಾವಣೆ ಕ್ಷೇತ್ರ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರ್ಜರಿ ಮತಯಾಚನೆ ಮಾಡುತ್ತಿದ್ದಾರೆ.

ಹೌದು, ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ರೋಣ ವಿಧಾನಸಭಾ ಮತಕ್ಷೇತ್ರದ ಕಣಗಿನಹಾಳ ಗ್ರಾಮದಲ್ಲಿ ಮತಯಾಚನೆಯನ್ನು ಮಾಡಿದರು.

ಕಾರ್ಯಕ್ರಮದ ಪೂರ್ವದಲ್ಲಿ ಗ್ರಾಮದ ಸಹಕಾರಿ ರಂಗದ ಪಿತಾಮಹ ಶ್ರೀ ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲ್ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದರು. ತದನಂತರ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.

ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಕಳಕಪ್ಪ ಬಂಡಿ ಸೇರಿದಂತೆ ಹಲವಾರು ಪ್ರಮುಖರು  ಹಾಜರಿದ್ದರು.

Related