ನಾಮಪತ್ರ ಸಲ್ಲಿಸಿದ ಬೊಮ್ಮಾಯಿ

ನಾಮಪತ್ರ ಸಲ್ಲಿಸಿದ ಬೊಮ್ಮಾಯಿ

ಹಾವೇರಿ: ಲೋಕಸಭಾ ಚುನಾವಣೆಗೆ ಈಗಾಗಲೇ ದೇಶದಲ್ಲಿ ಮೊದಲನೇ ಹಂತದ ಮತದಾನ ನಡೆಯುತ್ತಿದ್ದು ಇಂದು ಮಾಜಿ ಪ್ರಧಾನಿ ಬಸವರಾಜ್ ಬೊಮ್ಮಾಯಿ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ.

ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಹಾವೇರಿಯಲ್ಲಿ ಇಂದು ನಾಮಪತ್ರ ಸಲ್ಲಿಕೆಗೆ ತೆರಳುವ ಮುನ್ನ ಹಾವೇರಿಯ ಹುಕ್ಕೇರಿ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ನಂತರ ಬೃಹತ್ ಮೆರವಣಿಯಲ್ಲಿ ನಾಮಪತ್ರ ಸಲ್ಲಿಸಲು ತೆರಳಿದರು. ಇನ್ನು ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಬಿಜೆಪಿ ಅಲೆ ಎದ್ದಿದೆ, ಹಾಗಾಗಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಮಂತ್ರಿ ಯಾಗಲು ನೀವು ಬಿಜೆಪಿಗೆ ಮತದಾನ ಮಾಡಬೇಕೆಂದು ಮತದಾನದಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಸಂಸದ ಶಿವಕುಮಾರ ಉದಾಸಿ, ಮಾಜಿ ಸಚಿವರಾದ ಸಿ.ಸಿ. ಪಾಟೀಲ್, ಬಿ.ಸಿ.ಪಾಟೀಲ್, ಚಿತ್ರನಟಿ ತಾರಾ, ಮಾಜಿ ಶಾಸಕರಾದ ಅರುಣ್ ಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ, ಶಿವರಾಜ ಸಜ್ಜನ್ ಸೇರಿದಂತೆ ಮತ್ತಿತರ ನಾಯಕರು ಹಾಜರಿದ್ದರು.

Related