ಒಗ್ಗಟ್ಟಿನ ಮಂತ್ರ ಜಪಿಸಿದ ಶಾಸಕ ಸತೀಶ್ ರೆಡ್ಡಿ

ಒಗ್ಗಟ್ಟಿನ ಮಂತ್ರ ಜಪಿಸಿದ ಶಾಸಕ ಸತೀಶ್ ರೆಡ್ಡಿ

ಬೆಂಗಳೂರು: ಕೊರೋನಾ ಹೋಗಲಾಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಕರೆ ನೀಡಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಬಿಬಿಎಂಪಿ ಅಧಿಕಾರಿಗಳು, ಕಾರ್ಪೋರೇಟರ್‍ಗಳು ಸೇರಿದಂತೆ ಪ್ರತಿಯೊಬ್ಬರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿದರೆ ಮಾತ್ರ ಕೊರೋನಾ ಹೋಗಲಾಡಿಸಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಪ್ರತಿಯೊಂದು ವಾರ್ಡ್‍ಗೆ ಒಬ್ಬೊಬ್ಬರು ಹೆಲ್ತ್ ಇನ್ಸ್‍ಪೆಕ್ಟರ್ ನೇಮಿಸಬೇಕು. ಮನೆಮನೆಗೂ ತೆರಳಿ ಕೋವಿಡ್ ಪರೀಕ್ಷೆ ನಡೆಸಬೇಕು, ಸ್ಯಾನಿಟೈಸರ್, ಮಾಸ್ಕ್‍ಗಳನ್ನು ವಿತರಿಸಬೇಕು. ಆಂಬುಲೆನ್ಸ್ ವ್ಯವಸ್ಥೆ, ಹಾಸಿಗೆ ವ್ಯವಸ್ಥೆ, ರೋಗಿಗಳಿಗೆ ಆತ್ಮವಿಶ್ವಾಸ ತುಂಬುವುದು ಸೇರಿದಂತೆ ಹಲವು ಕಾರ್ಯಗಳನ್ನು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಗಂಟಲು ದ್ರವದ ಪರೀಕ್ಷಾ ವರದಿಯೂ ಅತಿ ಶೀಘ್ರದಲ್ಲಿ ತಲುಪುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಸಿಕ್ಷಣ ಸಚಿವ ಸುರೇಶ್ ಕುಮಾರ್, ಸಂಸದ ತೇಜಸ್ವಿ ಸೂರ್ಯ, ಹಿರಿಯ ಐಎಎಸ್ ಅಧಿಕಾರಿ ಮಣಿವಣ್ಣನ್ ಸೇರಿದಂತೆ ಬಿಬಿಎಂಪಿಯ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Related