ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ

ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ

ಬೊಮ್ಮನಹಳ್ಳಿ:  ಅಗರ ಲಕ್ಷ್ಮಿ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸತೀಶ್ ರೆಡ್ಡಿಯವರು ಪಾಲ್ಗೊಂಡು ಚಾಲನೆ ನೀಡಿದರು.
೧೫೦ ವರ್ಷಗಳ ಇತಿಹಾಸವಿರುವ ಲಕ್ಷ್ಮಿ ವೆಂಕಟರಮಣ ಸ್ವಾಮಿ ದೇವಾಲಯದ ಧರ್ಮಕರ್ತರಾದ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಶ್ರೀನಿವಾಸ ರೆಡ್ಡಿಯವರ ಕುಟುಂಬದ ಸದಸ್ಯರು ವಿಶೇಷ ಪೂಜೆಯನ್ನು ಸಲ್ಲಿಸಿ ರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಸಾವಿರಾರು ಭಕ್ತರು ಈ ರಥೋತ್ಸವದಲ್ಲಿ ಭಾಗವಹಿಸಿ ಭಗವಂತನ ಕೃಪಾಕಟಾಕ್ಷಕ್ಕೆ ಪಾತ್ರರಾದರು.
ಅಗರ ಕಾಂಗ್ರೆಸ್ ಕಾರ್ಯಕರ್ತರು ಏರ್ಪಡಿಸಿರುವ ವಿಶೇಷ ಅನ್ನದಾನ ಕರ್ಯಕ್ರಮದಲ್ಲಿ ಸಚಿವ ರಾಮಲಿಂಗಾರೆಡ್ಡಿಯವರು ಅನ್ನದಾಸೋಹ ಕರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು ೫ ಸಾವಿರಕ್ಕೂ ಅಧಿಕ ಭಕ್ತರು, ವಿವಿಧ ಗ್ರಾಮಗಳಿಂದ ಬಂದಂತಹ ಭಕ್ತಾಧಿಗಳು ಪ್ರಸಾದವನ್ನು ಸೇವಿಸಿ, ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Related