ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ?

ಅಧಿವೇಶನದ ಮುನ್ನವೇ ಸಂಪುಟ ವಿಸ್ತರಣೆ?

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ರಾಜ್ಯ ವಿಧಾನ ಮಂಡಲದ ಅಧಿವೇಶನದ ಪ್ರಾರಂಭವಾಗುವ ಮುನ್ನವೇ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಲ್ಲಿ ಶನಿವಾರ ತಿಳಿಸಿದರು.

ಕರ್ನಾಟಕ ಭವನ-1 ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ, ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ ಸಾಧ್ಯತೆ ಇದೆ ಎಂಬ ಅಂಶವನ್ನು ಬಹಿರಂಗಪಡಿಸಿದ ಮುಖ್ಯಮಂತ್ರಿ ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು.

ದೆಹಲಿ ಭೇಟಿ ಅತ್ಯಂತ ಯಶಸ್ವಿ:
ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡಾ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡಾ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು.

Related