ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ

ಮಹಾ ಸಿಎಂ ವಿರುದ್ಧ ಬಿಎಸ್‌ವೈ ಗರಂ

ಬೆಂಗಳೂರು :  ಮರಾಠಿ ಭಾಷೆ ಮತ್ತು ಸಂಸ್ಕೃತಿ ಪ್ರಧಾನ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳುವ ಮಾತನಾಡಿರುವುದು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಉದ್ಧಟತನದ ಪ್ರದರ್ಶನವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಸರಣಿ ಟ್ವೀಟ್ ಮೂಲಕ ಮಹಾರಾಷ್ಟ್ರ ಸಿಎಂ ವಿರುದ್ಧ ಹರಿಯಾಯ್ದಿರುವ ಮುಖ್ಯಮಂತ್ರಿ ಯಡಿಯೂರಪ್ಪ” ಮಹಾ ಸಿಎಂ ಅವರದು ಭಾರತೀಯ ಒಕ್ಕೂಟ ತತ್ವದ ವಿರುದ್ಧವಾದ ನಿಲುವು. ಮಹಾಜನ್ ವರದಿಯೇ ಅಂತಿಮ ಎಂಬುದು ಎಲ್ಲರೂ ಬಲ್ಲ ಸತ್ಯ ಎಂದರು.

Related