ಡಿಕೆಶಿ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!

ಡಿಕೆಶಿ ಬಗ್ಗೆ ಬಿಎಸ್‌ವೈ ಆಡಿದ ಮಾತು ವೈರಲ್!

ಬೆಂಗಳೂರು: 2023ನೆಯ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ಸಹ ಚುನಾವಣೆ ಸಂದರ್ಭದಲ್ಲಿನಜೋಡೆತ್ತುಗಳಂತೆ ರಾಜ್ಯದಾದ್ಯಂತ ಓಡಾಡಿದ್ದ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಫಲಿತಾಂಶ ಬಂದ ಬಳಿಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರು. ಇಬ್ಬರ ನಡುವೆ ತೀವ್ರ ಪೈಪೋಟಿ ವ್ಯಕ್ತವಾಗಿತ್ತು. ಆದರೆ ಈಗ, ಕರ್ನಾಟಕ ಸಿಎಂ ಆಯ್ಕೆ ಪ್ರಹಸನಕ್ಕೆ ತೆರೆ ಬಿದ್ದಿದ್ದು, ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಗದ್ದುಗೆ ಏರಲು ಸಿದ್ದರಾಮಯ್ಯ ಸಜ್ಜಾಗಿದ್ದಾರೆ. ಮೇ 20 ರಂದು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಸಂಜೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಸಿಎಂ ಆಗಿಯೇ ತೀರಬೇಕೆಂದು ಪಟ್ಟು ಹಿಡಿದಿದ್ದ ಡಿಕೆ ಶಿವಕುಮಾರ್ ಅವರಿಗೆ ಹಿನ್ನಡೆಯಾಗಿದ್ದು, ಈ ಬೆನ್ನಲ್ಲೇ ಡಿಕೆ ಶಿವಕುಮಾರ್ ಬಗ್ಗೆ ಬಿಎಸ್ ಯಡಿಯೂರಪ್ಪ ಅವರು ಹೇಳಿದ್ದ ಮಾತು ವೈರಲ್ ಆಗಿದೆ. ವಿಧಾನಸಭೆ ಕಲಾಪದಲ್ಲಿ ಮಾತನಾಡುವ ಸಂದರ್ಭದಲ್ಲಿ ಬಿಎಸ್‌ ಯಡಿಯೂರಪ್ಪ ಅವರು, ನೀವು ಕಾಂಗ್ರೆಸ್‌ನಲ್ಲಿದ್ದರೆ ಮುಖ್ಯಮಂತ್ರಿ ಆಗಬಹುದು ಎಂದುಕೊಂಡಿದ್ದಿರಾ? ಎಂದು ಪ್ರಶ್ನಿಸಿದ್ದರು. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

Related