2023-24 ಬಜೆಟ್‌ : ಶೈಕ್ಷಣಿಕ ವಲಯಕ್ಕೆ ಭರ್ಜರಿ ಕೊಡುಗೆ

2023-24 ಬಜೆಟ್‌ : ಶೈಕ್ಷಣಿಕ ವಲಯಕ್ಕೆ ಭರ್ಜರಿ ಕೊಡುಗೆ

ಬೆಂಗಳೂರು: ಸಿಎಂ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಬಜೆಟ್‌ ವಿಧಾನಸಭೆಯಲ್ಲಿ ಮಂಡನೆಯಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಈ ಆಡಳಿತಾವಧಿಯ ಕೊನೆಯ ಬಜೆಟ್ ಮಂಡನೆ ಮಾಡಿದ್ದಾರೆ. ಚುನಾವಣಾ ವರ್ಷ ಆಗಿರುವುದರಿಂದ ಬಜೆಟ್‌ನಲ್ಲಿ ಎಲ್ಲಾ ವರ್ಗದ ಜನರನ್ನು ತಲುಪಲು ಪ್ರಯತ್ನ ಪಟ್ಟಿರುವ ಸಿಎಂ ಬೊಮ್ಮಾಯಿ, ಭರಪೂರ ಘೋಷಣೆಗಳನ್ನು ಮಾಡಿದ್ದಾರೆ. ಇದರ ಜೊತೆಜೊತೆಗೆ ಶೈಕ್ಷಣಿಕ ವಲಯಕ್ಕೂ ಭರ್ಜರಿ ಕೊಡುಗೆ ಸಿಕ್ಕಿದೆ.

ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಾಣ ಮಾಡಲು ಹಾಗೂ ಮೂಲ ಸೌಕರ್ಯಗಳಿರುವ ವಸತಿ ಶಾಲೆಗಳನ್ನು ನಿರ್ಮಾಣ ಮಾಡಲು ಬಜೆಟ್​​ ಬಿಡುಗಡೆ ಮಾಡಲಾಗಿದೆ. ರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕೆಯ ವಾತಾವರಣವನ್ನು ಒದಗಿಸಲು ಎಲ್ಲಾ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ 632 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related