2 ಕಾರ್ಮಿಕರನ್ನು ಬಲಿ ಪಡೆದ ಕಟ್ಟಡ

2 ಕಾರ್ಮಿಕರನ್ನು ಬಲಿ ಪಡೆದ ಕಟ್ಟಡ

ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ ಬೆಂಕಿ ಅವಗಡಕ್ಕೆ ಕಟ್ಟಡಗಳು ಆಗುತ್ತಿಯಾಗುವುದರ ಜೊತೆಗೆ ಕಟ್ಟಡ ಕಾರ್ಮಿಕರು ಕೂಡ ಆಹುತಿಯಾಗುತ್ತಿರುವುದು ಹೆಚ್ಚು ಕಂಡು ಬರುತ್ತಿದೆ. ಅದರಂತೆ ಮತ್ತೆ ಇದೀಗ ಬೆಂಗಳೂರು ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡಕ್ಕೆ ಬೆಂಕಿ ತಗಲಿ ಇಬ್ಬರು ಕಾರ್ಮಿಕರು ಸಹಜೀವ ದಹನ ವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದ್ದು, ಮೃತರನ್ನು ಉತ್ತರ ಪ್ರದೇಶ ಮೂಲದ ಉದಯ್ ಭಾನು (40) ಮತ್ತು ಬಿಹಾರ ಮೂಲದ ರೋಷನ್ (23) ಎಂದು ಗುರುತಿಸಲಾಗಿದೆ.

ಸೀಗೆಹಳ್ಳಿಯಲ್ಲಿ ನಿರ್ಮಾಣ ಹಂತದ 4 ಅಂತಸ್ತಿನ ಕಟ್ಟಡ ಇದಾಗಿದ್ದು ಇಂದು (ಗುರುವಾರ ಫೆ. 06) ರಂದು ಮಧ್ಯಾಹ್ನ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಕಾರ್ಮಿಕರಲ್ಲಿ ಒಬ್ಬ ಪೇಂಟರ್, ಮತ್ತೊಬ್ಬರು ಕಾರ್ಪೆಂಟರ್ ವೃತ್ತಿ ಮಾಡುತ್ತಿದ್ದರು.

ಕಡಬಗೆರೆ ಕ್ರಾಸ್‍ನಲ್ಲಿ ಸತೀಶ್ ಎಂಬುವರು 4 ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿದ್ದು, ಕೆಲ ಕಾರ್ಮಿಕರು ಈ ಕಟ್ಟಡದಲ್ಲೇ ಅಡುಗೆ ಮಾಡಿಕೊಂಡು ಅಲ್ಲೇ ವಾಸವಿರುತ್ತಾರೆ. ಇದನ್ನೂ ಓದಿ: ಭೀಕರ ಅಪಘಾತಗಳಲ್ಲಿ 14 ಮಂದಿ ಸಾವು: ಸಿಎಂ ಸಂತಾಪ

ಇಂದು ಈ ಕಟ್ಟಡದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಕ್ಕ-ಪಕ್ಕದವರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. 4 ಅಗ್ನಿಶಾಮಕ ವಾಹನಗಳೊಂದಿಗೆ ದಾವಿಸಿದ ಸಿಬ್ಬಂದಿ ಬೆಂಕಿಯನ್ನು ನಂದಿಸಿದರಾದರೂ ಅಷ್ಟರಲ್ಲಾಗಲೇ ಇಬ್ಬರು ಕಾರ್ಮಿಕರು ಸಜೀವ ದಹನವಾಗಿದ್ದು, ಮತ್ತೊಬ್ಬ ಕಾರ್ಮಿಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

Related