ಕೇಂದ್ರ ಬಜೆಟ್ ಮಂಡನೆ; ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ

ಕೇಂದ್ರ ಬಜೆಟ್ ಮಂಡನೆ; ಮಹಿಳಾ ವಲಯಕ್ಕೆ ಬಂಪರ್ ಕೊಡುಗೆ

ದೆಹಲಿ: ಕೇಂದ್ರ ಬಜೆಟ್ ನಲ್ಲಿ ಈ ಬಾರಿ ನಿರ್ಮಲಾ ಸೀತಾರಾಮನ್ ಅವರು ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಬಂಪರ್ ಕೊಡುಗೆಯನ್ನು ನೀಡಿದ್ದಾರೆ.

ಹೌದು, 2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಈ ಬಾರಿ ಮಹಿಳೆಯರಿಗೆಂದೆ ವಿಶೇಷವಾಗಿ ಕೊಡುಗೆಯನ್ನು ನೀಡಲಾಗಿದ್ದು ಈ ಬಜೆಟ್ ನಲ್ಲಿ ಮಹಿಳೆಯರಿಗೆ ಮತ್ತು ಬಾಲಕಿಯರಿಗೆ 3 ಲಕ್ಷ ಕೋಟಿ ರೂಪಾಯಿ ಮೊತ್ತದ ಯೋಜನೆಗಳನ್ನು ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರು ಘೋಷಿಸಿದ್ದಾರೆ. ಇದನ್ನೂ ಓದಿ: ಕೇಂದ್ರ ಬಜೆಟ್ ಮಂಡನೆ; ಉದ್ಯೋಗಾಕಾಂಕ್ಷಿಗಳಿಗೆ ಬಂಪರ್​ ಕೊಡುಗೆ

ಆರ್ಥಿಕ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವನ್ನು ಹೆಚ್ಚಿಸಲು ಹೆಣ್ಣುಮಕ್ಕಳು ಮತ್ತು ಮಹಿಳೆಯರಿಗೆ ಲಾಭದಾಯಕ ಯೋಜನೆಗಳಿಗಾಗಿ ಬಜೆಟ್​ನಲ್ಲಿ 3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ. ಉದ್ಯೋಗಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ಮಹಿಳಾ ವಸತಿ ನಿಲಯಗಳನ್ನು ಸ್ಥಾಪಿಸುತ್ತದೆ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಉತ್ತೇಜಿಸಲು ಸರ್ಕಾರವು ವರ್ಕಿಂಗ್ ವುಮನ್ ಹಾಸ್ಟೆಲ್‌ಗಳನ್ನು ಸ್ಥಾಪಿಸುತ್ತದೆ ಎಂದು ಹಣಕಾಸು ಸಚಿವರು ಘೋಷಿಸಿದರು. ನಿರ್ಮಲಾ ಸೀತಾರಾಮನ್ ಉದ್ಯೋಗ, ಕೌಶಲ್ಯ, MSME ಗಳು ಮತ್ತು ಮಧ್ಯಮ ವರ್ಗದ ಮೇಲೆ ಈ ಬಾರಿಯ ಬಜೆಟ್ ಕೇಂದ್ರೀಕರಿಸುತ್ತದೆ ಎಂದು ಹೇಳಿದರು. “ಮಧ್ಯಂತರ ಬಜೆಟ್‌ನಲ್ಲಿ ಉಲ್ಲೇಖಿಸಿರುವಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಮೇಲೆ ಕೇಂದ್ರೀಕರಿಸಬೇಕಾಗಿದೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

 

Related