ನದಿ ಕಣಿವೆಗೆ ಉರುಳಿದ ಬಸ್ – 6 ಮಂದಿ ಯೋಧರು ಸಾವು

  • In Crime
  • August 16, 2022
  • 286 Views
ನದಿ ಕಣಿವೆಗೆ ಉರುಳಿದ ಬಸ್ – 6 ಮಂದಿ ಯೋಧರು ಸಾವು

ಕಾಶ್ಮೀರ್, ಆ 16 : ಐಟಿಬಿಪಿ ಮತ್ತು ಜಮ್ಮು ಕಾಶ್ಮೀರ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ಬಸ್ ಬ್ರೇಕ್ ಫೇಲ್ ಆಗಿ ನದಿ ಕಣಿವೆಗೆ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಐಟಿಬಿಪಿ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕಾಶ್ಮೀರದ ಪಹಲ್ಗಾಮ್‍ನ ಫ್ರಿಸ್ಲಾನ್‍ನಲ್ಲಿ ಈ ದುರ್ಘಟನೆ ನಡೆದಿದೆ.

ಅಮರನಾಥ ಯಾತ್ರೆ ಪ್ರದೇಶದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ 37 ಐಟಿಬಿಪಿ, ಇಬ್ಬರು ಜಮ್ಮು-ಕಾಶ್ಮೀರ ಪೊಲೀಸರನ್ನು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಕರೆದೊಯ್ಯುಲಾಗುತ್ತಿತ್ತು. ಈ ಸಂದರ್ಭದಲ್ಲಿ ಘಟನೆ ನಡೆದಿದ್ದು, ಇನ್ನು ಹಲವು ಸಿಬ್ಬಂದಿಗಳು ಗಾಯಗಳಾಗಿರುವ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಸಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

Related