ಬಸ್ ಪಲ್ಟಿ : 10 ಜನರಿಗೆ ಗಾಯ

ಬಸ್ ಪಲ್ಟಿ : 10 ಜನರಿಗೆ ಗಾಯ

ಚಿತ್ರದುರ್ಗ, ಫೆ. 19 : ನಗರದ ಹೊರವಲಯದ ಕುಂಚಿಗನಾಳ್ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ. 10 ಜನ ಗಾಯಗೊಂಡಿದ್ದಾರೆ.
ದಾವಣಗೆರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ವೋಲ್ವೋ ಬಸ್ ಚಿತ್ರದುರ್ಗ ತಾಲೂಕಿನ ಕುಂಚಿಗನಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಲಾರಿಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಬಂದು ಪಲ್ಟಿಯಾಗಿದೆ. ಮೂರು ಜನ ಗಂಭೀರ ಗಾಯಗೊಂಡಿದ್ದು, 10 ಜನ ಗಾಯಾಳುಗಳಾಗಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related