ಮತ್ತೆ ಸ್ತಬ್ಧಗೊಳ್ಳಲಿದೆ ಬಸ್ ಸಂಚಾರ

ಮತ್ತೆ ಸ್ತಬ್ಧಗೊಳ್ಳಲಿದೆ ಬಸ್ ಸಂಚಾರ

ಬೆಂಗಳೂರು : ಸಾರಿಗೆ ಇಲಾಖೆ ಸಿಬ್ಬಂದಿಗಳ ಬೇಡಿಕೆಯನ್ನು ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ಮತ್ತೆ ಬಸ್ ಮುಷ್ಕರ ನಡೆಸಲು ಯೋಜನೆ ರೂಪಿಸಲಾಗಿದ್ದು, ಕೊಟ್ಟ ಭರವಸೆಯನ್ನು ಸರ್ಕಾರ ಈಡೇರಿಸದೇ ಇದ್ದಲ್ಲಿ ಹೋರಾಟಕ್ಕೆ ಸಜ್ಜಾಗಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕೋಡಿಹಳ್ಳಿ, ಮೂರು ತಿಂಗಳಲ್ಲಿ ಸಾರಿಗೆ ಸಿಬ್ಬಂದಿಗಳ ಬೇಡಿಕೆ ಈಡೇರಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ ಈವರೆಗೂ ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಸಿಬ್ಬಂದಿಗಳ ಸಂಬಳ ಪಾವತಿಯನ್ನು ಬಾಕಿ ಉಳಿಸಿಕೊಂಡಿದೆ. ಈ ತಿಂಗಳಾಂತ್ಯದ ಒಳಗೆ ಸರ್ಕಾರ ಬೇಡಿಕೆ ಈಡೇರಿಸದಿದ್ದರೆ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಮಾಡಿ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

Related