ಸರ್ಕಾರಿ ಬಸ್ ಗಳ ಮಧ್ಯೆ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯ..!

  • In Crime
  • July 8, 2022
  • 330 Views
ಸರ್ಕಾರಿ ಬಸ್ ಗಳ ಮಧ್ಯೆ ಡಿಕ್ಕಿ,10ಕ್ಕೂ ಹೆಚ್ಚು ಮಂದಿಗೆ ಗಾಯ..!

ಬೆಳಗಾವಿ, ಜು 08 : ಎರಡು ಸರ್ಕಾರಿ ಬಸ್ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಬೆಳಗಾವಿ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ನಡೆದಿದೆ.

ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಎರಡು ಸರ್ಕಾರಿ ಬಸ್ ಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಸರ್ಕಾರಿ ಬಸ್ ಬೆಳಗಾವಿ ನಗರದಿಂದ ಬಾಗಲಕೋಟೆಗೆ ತೆರಳುತ್ತಿತ್ತು. ಈ ಮಧ್ಯೆ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಬಸ್ ಅಪಘಾತವಾಗಿದ್ದು, ಎರಡು ಬಸ್ಗಳ ಮುಂಭಾಗ ನಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related