ಸಿದ್ಧರಾಮಯ್ಯ ವಿರುದ್ದ ಬಿ.ವೈ ವಿಜಯೇಂದ್ರ ತಿರುಗೇಟು

ಸಿದ್ಧರಾಮಯ್ಯ ವಿರುದ್ದ ಬಿ.ವೈ ವಿಜಯೇಂದ್ರ ತಿರುಗೇಟು

 ಕಲಬುರಗಿ  : ಶಿರಾ, ರಾಜರಾಜೇಶ್ವರಿ ಕ್ಷೇತ್ರದ ಉಪಚುನಾವಣೆಯಲ್ಲಿ ಅಧಿಕಾರ ದುರುಪಯೋಗ ಪಡಿಸಿಕೊಂಡಿಲ್ಲ. ಆಮಿಷವೊಡ್ಡಿದರೆ ಮತದಾರ ಬೆಂಬಲಿಸಲ್ಲ ಎಂಬುದನ್ನು ಸಿದ್ದರಾಮಯ್ಯ ಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದರು.

ಶಿರಾದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ವೈಫಲ್ಯಗಳನ್ನು ಎತ್ತಿ ತೋರಿಸಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಎತ್ತಿ ತೋರಿಸಿದ್ದೇವೆ. ಎಲ್ಲಿಯೂ ಅಧಿಕಾರ ದುರ್ಬಳಕೆ ಮಾಡಿಕೊಂಡಿಲ್ಲ. ಸೋಲಿನ ಹತಾಶೆಯಿಂದ ಸಿದ್ಧರಾಮಯ್ಯ ಹೀಗೆ ಮಾತಾಡುತ್ತಿದ್ದಾರೆ ಎಂದರು.

ಹಿಂದೆ 15 ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. 15ರಲ್ಲಿ 12 ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿತ್ತು. ಮೊನ್ನೆ ನಡೆದ ಚುನಾವಣೆಯಲ್ಲಿ 2 ಕ್ಷೇತಗಳಲ್ಲಿ ಶಿರಾ ಕ್ಷೇತ್ರ ಗೆಲ್ಲುವುದು ದೊಡ್ಡ ಸವಾಲಾಗಿತ್ತು. ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಗಳು ಜಾತಿ ಆಧಾರದ ಮೇಲೆ ರಾಜಕಾರಣ ಮಾಡುತ್ತಿವೆ. ಆದರೆ, ಬಿಜೆಪಿ ಎಲ್ಲ ಸಮುದಾಯಗಳನ್ನು ಒಂದಾಗಿ ಕಂಡಿರುವುದರಿAದ ಕಮಲ ಅರಳಿದೆ. ಎಲ್ಲಿಯೇ ಹೋದರೂ ಕಮಲ ಅರಳುತ್ತದೆ ಅನ್ನುವ ವಿಶ್ವಾಸವಿದೆ ಎಂದರು.

Related