ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ತಾಕೀತು

ಸಿ.ಸಿ. ಪಾಟೀಲ ಅಧಿಕಾರಿಗಳಿಗೆ ತಾಕೀತು

ನರಗುಂದ : ಪಟ್ಟಣದಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣದ ಬಸವೇಶ್ವರ ಸಮುದಾಯ ಭವನವನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಘೊಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಹೇಳಿದರು.

ಪಟ್ಟಣದ ಗಾಡಿ ಓಣಿ, ಸಿದ್ದನಬಾವಿ ಬಡಾವಣೆಯ ಕಂಟೇನ್ಮೆಂಟ್ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಲಿರುವ ಬಸವೇಶ್ವರ ಸಮುದಾಯ ಭವನವನ್ನು ಪರಿಶೀಲಿಸಿ ಮಾತನಾಡಿದರು.

ತಾಲೂಕಿನಾದ್ಯಂತ ಲಭ್ಯವಿರುವ ಎಲ್ಲ ಸುಸಜ್ಜಿತ ಸರ್ಕಾರಿ ಕಟ್ಟಡಗಳನ್ನು ಗುರುತಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಕಂಟೇನ್ಮೆಂಟ್ ಪ್ರದೇಶಗಳಲ್ಲಿ ಆಗಸ್ಟ್ ತಿಂಗಳವರೆಗೂ ಔಷಧ ಸಿಂಪಡಿಸಬೇಕು ಎಂದರು.

Related