ಸಚಿವ ಸಂಪುಟದಲ್ಲಿಂದು ಬರ ಪೀಡಿತ ಪ್ರದೇಶಗಳ ಘೋಷಣೆ

ಸಚಿವ ಸಂಪುಟದಲ್ಲಿಂದು ಬರ ಪೀಡಿತ ಪ್ರದೇಶಗಳ ಘೋಷಣೆ

ಬೆಂಗಳೂರು, ಸೆ. 7: ಕೇಂದ್ರದ ನಿಯಮಾನುಸಾರ 62 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡುವ ಸಾಧ್ಯತೆ ,ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಉಪಸಮಿತಿ, 113 ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿದ್ದು, ಈ ವರ್ಷ ಕಡಿಮೆ ಮಳೆಯಾಗಿರುವ 62 ತಾಲ್ಲೂಕುಗಳನ್ನು ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಗುರುತಿಸಲಾಗಿತ್ತು.ಕಳೆದ ತಿಂಗಳ ಸಮೀಕ್ಷೆ ನಡೆಸಿದ ನಂತರ ಇನ್ನೂ 51 ತಾಲ್ಲೂಕುಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ.

ಮರು ಸಮೀಕ್ಷೆ ಮಾಡಬೇಕಾದ 51 ತಾಲ್ಲೂಕುಗಳು ಸೇರಿದಂತೆ ಎಲ್ಲಾ 134 ತಾಲ್ಲೂಕುಗಳಲ್ಲಿ ಸಮೀಕ್ಷೆಗೆ ಸಂಪುಟ ಒಪ್ಪಿಗೆ ನೀಡುವ ನಿರೀಕ್ಷೆಯಿದೆ. ರಾಜ್ಯ ಸರ್ಕಾರ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಖಾತರಿಗಳ ಪೈಕಿ ನಾಲ್ಕನ್ನು ಜಾರಿಗೊಳಿಸಿದ್ದು, ಇವುಗಳ ಹಣಕಾಸು ನಿರ್ವಹಣೆ ಹಾಗೂ ಅನುಷ್ಠಾನದ ಸ್ಥಿತಿಗತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇವುಗಳಲ್ಲದೆ ಇನ್ನೂ 83 ತಾಲ್ಲೂಕುಗಳನ್ನು ಮಳೆ ಕೊರತೆ ಇರುವ ತಾಲ್ಲೂಕುಗಳೆಂದು ಗುರುತಿಸಲಾಗಿದ್ದು, ಈ ವಿಷಯವನ್ನು ಸಂಪುಟದ ಮುಂದೆ ಮಂಡಿಸುವ ಸಾಧ್ಯತೆಯಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Related