ಈ ಬಾರಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಯಲ್ಲಿ ಎಲ್ಲವೂ ಸುಗಮವಾಗಿ ಸಾಗುತ್ತಿದ್ದು ಇದೀಗ ಐಪಿಎಲ್ ಪಂದ್ಯಾವಳಿ ರದ್ದುಗೊಳಿಸುವುದಾಗಿ ಐಪಿಎಲ್ ಮುಖ್ಯಸ್ಥ ಅರುಣ್ ಧಮಾಲ್ ಅವರು ಸುಳಿವು ಕೊಟ್ಟಿದ್ದಾರೆ.
ದೇಶದಲ್ಲಿ ಭಾರತ ಮತ್ತು ಪಾಕಿಸ್ತಾನಗಳ ನಡುವೆ ನಡೆಯುತ್ತಿರುವ ಕಾದಾಟದಿಂದಾಗಿ ಐಪಿಎಲ್ ಪಂದ್ಯಾವಳಿಗಳ ಮೇಲೆ ಪ್ರಭಾವ ಬೀರಲಿದೆ.
ಹೌದು, ಈ ಬಾರಿ ನಡೆಯುತ್ತಿರುವ ಐಪಿಎಲ್ ಪಂದ್ಯಾವಳಿಗಳನ್ನು ಮುಂದೂಡೋದಾಗಿ ಇಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ತಿಳಿದು ಬರಲಿದ್ದು ಐಪಿಎಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ ಪಂದ್ಯಾವಳಿ ಮುಂದೂಡಿಕೆ ಆಗುವ ಸಾಧ್ಯತೆ ಇದೆ. ಸದ್ಯದ ಮಟ್ಟಿಗೆ ಎಲ್ಲಾ ವಿದೇಶಿ ಆಟಗಾರರನ್ನು ವಾಪಸ್ ಕಳುಹಿಸುವ ಸಾಧ್ಯತೆ ಹೆಚ್ಚಾಗಿದೆ. ಈ ಸಂಬಂಧ ಇಂದು ಬಿಸಿಸಿಐ ತುರ್ತು ಸಭೆ ಕರೆದಿದೆ. ನಿನ್ನೆ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಮುಂದೂಡಲಾಗಿದೆ.
ಆಟಗಾರರಿಗಾಗಿ ವಿಶೇಷ ರೈಲು
ದೆಹಲಿ ಮತ್ತು ಪಂಜಾಬ್ ನಡುವಿನ ಪಂದ್ಯ ಮುಂದೂಡಿದ ನಂತರ ಬಿಸಿಸಿಐ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಆಟಗಾರರು, ಸಹಾಯಕ ಸಿಬ್ಬಂದಿ ಮತ್ತು ಪ್ರಸಾರ ಸಿಬ್ಬಂದಿಯನ್ನು ಇಂದು ವಿಶೇಷ ರೈಲು ಮೂಲಕ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗುತ್ತಿದೆ. ಇನ್ನು, ದೆಹಲಿ ಮತ್ತು ಪಂಜಾಬ್ ನಡುವಿನ ಪಂದ್ಯ ವೀಕ್ಷಿಸಲು ಬಂದಿದ್ದ ಜನರನ್ನೂ ಕ್ರೀಡಾಂಗಣದಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಆಟಗಾರರ ಸುರಕ್ಷತೆಯ ವಿಷಯದಲ್ಲಿ ಯಾವುದೇ ರಾಜಿ ಇಲ್ಲ ಎಂದು ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ: ನ್ಯೂಜಿಲೆಂಡ್ ಗೆ ಸೋಲಿಸಿದ ಟೀಮ್ ಇಂಡಿಯಾ
ಇಂದು ಬಿಸಿಸಿಐ ಮಹತ್ವದ ಸಭೆ ನಡೆಸಲಿದೆ. ಈ ಸಭೆಯಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಬೇಕಾ? ಅಥವಾ ಮುಂದೂಡಬೇಕಾ ಅನ್ನೋದ್ರ ಬಗ್ಗೆ ನಿರ್ಧಾರ ಆಗಲಿದೆ ಎಂದು ಐಪಿಎಲ್ ಮುಖ್ಯಸ್ಥ ಅರುಣ್ ಧಮಾಲ್ ತಿಳಿಸಿದ್ದಾರೆ. ನಮಗೆ ಕೇಂದ್ರ ಸರ್ಕಾರದಿಂದ ಯಾವುದೇ ನಿರ್ದೇಶನ ಬಂದಿಲ್ಲ. ಸದ್ಯದ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ. ಶೀಘ್ರದಲ್ಲೇ ನಿರ್ಧಾರ ಕೈಗೊಳ್ತೇವೆ ಎಂದು ತಿಳಿಸಿದ್ದಾರೆ.