ಮೃತದೇಹ ಪತ್ತೆ: ಕೊಲೆ ಶಂಕೆ

ಮೃತದೇಹ ಪತ್ತೆ: ಕೊಲೆ ಶಂಕೆ

ಶಹಾಪುರ : ತಾಲೂಕಿನ ಗೋಗಿ ಕೆ. ಗ್ರಾಮದ ಹೊರವಲಯದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಕಾಸಿಂಸಾಬ್ (50) ಎಂದು ಗುರುತಿಸಲಾಗಿದೆ.

ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಗ್ರಾಮಸ್ಥರು ಬಾಹಿರ್ದೆಸೆಗೆ ಹೋಗುವಾಗ ಶವ ಕಂಡು ಪೊಲೀಸರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಗೋಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಿರುವುದಾಗಿ ಸಿಪಿಐ ಶ್ರೀನಿವಾಸ್ ಅಲ್ಲಾಪುರ್ ತಿಳಿಸಿದ್ದಾರೆ.

ವ್ಯಕ್ತಿಯ ಶವದ ಮೇಲೆ ಮಚ್ಚಿನಿಂದ ಹೊಡೆದ ಗುರುತುಗಳಿದ್ದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ. ಪೊಲೀಸರು ತನಿಖೆ ಮುಂದುವರೆಸಿದ್ದು ನಂತರವೇ ಕೊಲೆಗೆ ಕಾರಣ ತಿಳಿಯಲಿದೆ.

ಸ್ಥಳಕ್ಕೆ ಎಸ್.ಪಿ ವೇದಮೂರ್ತಿ, ಡಿವೈಎಸ್‌ಪಿ ವೆಂಕಟೇಶ್ ಹುಗಿಬಂಡಿ ಭೇಟಿ ನೀಡಿದರು.

Related