ಕಾವೇರಿ ವಿಚಾರವಾಗಿ ನಾಳೆ ದೆಹಲಿಯಲ್ಲಿ ಸಭೆ

ಕಾವೇರಿ ವಿಚಾರವಾಗಿ ನಾಳೆ ದೆಹಲಿಯಲ್ಲಿ ಸಭೆ

ಬೆಂಗಳುರು, ಸೆ.19: ಕಳೆದ ಒಂದು ತಿಂಗಳಿಗೂ ಹೆಚ್ಚು ಕರ್ನಾಟಕದಿಂದ ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ತಮಿಳುನಾಡು ಸರ್ಕಾರ ಪದೇ ಪದೇ ನೀರು ಹರಿಸುವಂತೆ ಕ್ಯಾತೆ ತೆಗೆದಿತ್ತು. ಕಾವೇರಿ ನೀರು ಹಂಚಿಕೆ ಸಮಸ್ಯೆ ಬಗೆಹರಿಸಲು ನಿನ್ನೆ ದೆಹಲಿಯಲ್ಲಿ CWMA ಸಭೆ ನಡೆಸಲಾಗಿತ್ತು.

ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶಿಸಿತ್ತು. ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ., ಕೇಂದ್ರದ ಬಳಿ ಬಾಕಿ ಯೋಜನೆಗಳ ಅನುದಾನ ಬರ ಪರಿಹಾರದ ಬಗ್ಗೆ ಕೂಡ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸಿಎಂ ಹಾಗೂ ಡಿಸಿಎಂ ಮಾಹಿತಿ ಪಡೆಯಲಿದ್ದಾರೆ.ಜೊತೆಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಕೂಡ ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆ ಆರ್ ಎಸ್ ಡ್ಯಾಮ್ ನಿಂದ ತಮಿಳುನಾಡಿಗೆ ಈ ಹಿಂದೆ ಸರ್ಕಾರ ನೀರು ಬಿಟ್ಟಿದ್ದು ಇದನ್ನು ವಿರೋಧಿಸಿ ಸ್ಥಳೀಯ ರೈತರು ಪ್ರತಿಭಟನೆ ಮಾಡಿದ್ದರು.

Related